Bible

1 Chronicles 26 - DBY (Kannada)

1 The divisions of the doorkeepers. Of the Korahites: Meshelemiah the son of Kore, of the sons of Asaph.ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.

2 And Meshelemiah had sons: Zechariah the firstborn, Jediael the second, Zebadiah the third, Jathniel the fourth,ಮೆಷೆಲೆಮ್ಯನ ಕುಮಾ ರರು--ಚೊಚ್ಚಲ ಮಗನು ಜೆಕರ್ಯನು, ಎರಡನೆ ಯವನು ಎದೀಯಯೇಲನು, ಮೂರನೆ ಯವನು ಜೆಬದ್ಯನು, ನಾಲ್ಕನೆಯವನು ಯತ್ನಿಯೇಲನು,

3 Elam the fifth, Johanan the sixth, Elioenai the seventh.ಐದನೆ ಯವನು ಎಲಾಮನು, ಆರನೆಯವನು ಯೆಹೋ ಹಾನಾನನು, ಏಳನೆಯವನು ಎಲ್ಯೆಹೋಯೇನೈ.

4 -- And the sons of Obed-Edom: Shemaiah the firstborn, Jehozabad the second, Joah the third, and Sacar the fourth, and Nethaneel the fifth,ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು

5 Ammiel the sixth, Issachar the seventh, Peulthai the eighth: for God had blessed him.ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು.

6 And to Shemaiah his son were sons born, who were rulers in their father's house; for they were mighty men of valour.ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.

7 The sons of Shemaiah: Othni, and Rephael, and Obed, [and] Elzabad, whose brethren were valiant men, Elihu and Semachiah.ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.

8 All these were of the sons of Obed-Edom: they and their sons and their brethren, able men in strength for the service, were sixty-two of Obed-Edom.ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.

9 -- And Meshelemiah had sons and brethren, men of valour, eighteen.ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.

10 -- And Hosah, of the sons of Merari, had sons: Shimri the head, for though he was not the firstborn, yet his father made him the head;ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;

11 Hilkijah the second, Tebaliah the third, Zechariah the fourth: all the sons and brethren of Hosah were thirteen.ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.

12 Among these were the divisions of the doorkeepers, among the head-men, as to the charges together with their brethren, for performing the service in the house of Jehovah.ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.

13 And they cast lots, the small as well as the great, according to their fathers' houses, for every gate.ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು.

14 And the lot eastward fell to Shelemiah; and they cast lots for Zechariah his son, a wise counsellor, and his lot came out northward;ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.

15 to Obed-Edom southward; and to his sons the storehouse.ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್‌ ಎಂಬ ಮನೆ ಬಂತು.

16 To Shuppim and Hosah westward, with the gate Shallecheth, by the causeway of the ascent, watch against watch.ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.

17 Eastward were six Levites, northward four a day, southward four a day, and in the storehouse two [and] two.ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ

18 At the portico westward, four at the causeway, two at the portico.ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು.

19 These are the divisions of the doorkeepers among the sons of the Korahites and among the sons of Merari.ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.

20 And the Levites: Ahijah was over the treasures of the house of God, and over the treasures of the dedicated things.ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.

21 The sons of Laadan, the sons of the Gershonites of Laadan, chief fathers of Laadan the Gershonite: Jehieli;ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.

22 the sons of Jehieli: Zetham, and Joel his brother, over the treasures of the house of Jehovah.ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.

23 As to the Amramites, the Jizharites, the Hebronites, the Uzzielites....ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.

24 And Shebuel the son of Gershom, the son of Moses, was overseer of the treasures.ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.

25 And his brethren, of Eliezer: Rehabiah his son, and Isaiah his son, and Joram his son, and Zichri his son, and Shelomith his son.ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.

26 This Shelomith and his brethren were over all the treasures of the dedicated things, which king David, and the chief fathers, the captains over thousands and hundreds, and the captains of the host, had dedicatedಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.

27 (from the wars and out of the spoils had they dedicated [them], to maintain the house of Jehovah),ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.

28 and all that Samuel the seer, and Saul the son of Kish, and Abner the son of Ner, and Joab the son of Zeruiah had dedicated: all that was dedicated was under the hand of Shelomith and of his brethren.ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.

29 Of the Jizharites, Chenaniah and his sons were over Israel, for the outward business for officers and judges.ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.

30 Of the Hebronites, Hashabiah and his brethren, men of valour, a thousand and seven hundred, for the administration of Israel on this side Jordan westward, for all the business of Jehovah, and for the service of the king.ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.

31 Of the Hebronites was Jerijah the head; (as to the Hebronites, according to their families according to the fathers: in the fortieth year of the reign of David they were sought for, and there were found among them mighty men of valour at Jaazer in Gilead;)ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.

32 and his brethren, men of valour, two thousand seven hundred chief fathers, whom king David made rulers over the Reubenites and the Gadites and the half tribe of the Manassites, for every matter pertaining to God, and the affairs of the king.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.

Kannada Bible