1 John 1 - BBE (Kannada)
1 That which was from the first, which has come to our ears, and which we have seen with our eyes, looking on it and touching it with our hands, about the Word of lifeಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
2 (And the life was made clear to us, and we have seen it and are witnessing to it and giving you word of that eternal life which was with the Father and was seen by us);(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
3 We give you word of all we have seen and everything which has come to our ears, so that you may be united with us; and we are united with the Father and with his Son Jesus Christ:ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
4 And we are writing these things to you so that our joy may be made complete.ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
5 This is the word which came to us from him and which we give to you, that God is light and in him there is nothing dark.ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
6 If we say we are joined to him, and are walking still in the dark, our words are false and our acts are untrue:ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
7 But if we are walking in the light, as he is in the light, we are all united with one another, and the blood of Jesus his Son makes us clean from all sin.ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
8 If we say that we have no sin, we are false to ourselves and there is nothing true in us.ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
9 If we say openly that we have done wrong, he is upright and true to his word, giving us forgiveness of sins and making us clean from all evil.ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.
10 If we say that we have no sin, we make him false and his word is not in us.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
Kannada Bible