1 John 1 - DBY (Kannada)
1 That which was from [the] beginning, that which we have heard, which we have seen with our eyes; that which we contemplated, and our hands handled, concerning the word of life;ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
2 (and the life has been manifested, and we have seen, and bear witness, and report to you the eternal life, which was with the Father, and has been manifested to us:)(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
3 that which we have seen and heard we report to you, that *ye* also may have fellowship with us; and our fellowship [is] indeed with the Father, and with his Son Jesus Christ.ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
4 And these things write we to you that your joy may be full.ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
5 And this is the message which we have heard from him, and declare to you, that God is light, and in him is no darkness at all.ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
6 If we say that we have fellowship with him, and walk in darkness, we lie, and do not practise the truth.ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
7 But if we walk in the light as *he* is in the light, we have fellowship with one another, and the blood of Jesus Christ his Son cleanses us from all sin.ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
8 If we say that we have no sin, we deceive ourselves, and the truth is not in us.ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
9 If we confess our sins, he is faithful and righteous to forgive us [our] sins, and cleanse us from all unrighteousness.ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.
10 If we say that we have not sinned, we make him a liar, and his word is not in us.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
Kannada Bible