1ಅರಸನಾದ ದಾವೀದನು ವೃದ್ಧನಾಗಿಯೂ ಬಹಳ ಪ್ರಾಯಹೋದವನಾಗಿಯೂ ಇರುವಾಗ ಅವನನ್ನು ವಸ್ತ್ರಗಳಿಂದ ಹೊದಿಸಿದರು; ಆದರೆ ಅವನಿಗೆ ಬೆಚ್ಚಗಾಗಲಿಲ್ಲ.Now king David was old and stricken in years; and they covered him with clothes, but he gat no heat.
2ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು.Wherefore his servants said unto him, Let there be sought for my lord the king a young virgin: and let her stand before the king, and let her cherish him, and let her lie in thy bosom, that my lord the king may get heat.
3ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್‌ಳಾದ ಅಬೀಷಗ್‌ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.So they sought for a fair damsel throughout all the coasts of Israel, and found Abishag a Shunammite, and brought her to the king.
4ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.And the damsel was very fair, and cherished the king, and ministered to him: but the king knew her not.
5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.Then Adonijah the son of Haggith exalted himself, saying, I will be king: and he prepared him chariots and horsemen, and fifty men to run before him.
6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.And his father had not displeased him at any time in saying, Why hast thou done so? and he also was a very goodly man; and his mother bare him after Absalom.
7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.And he conferred with Joab the son of Zeruiah, and with Abiathar the priest: and they following Adonijah helped him.
8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.But Zadok the priest, and Benaiah the son of Jehoiada, and Nathan the prophet, and Shimei, and Rei, and the mighty men which belonged to David, were not with Adonijah.
9ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.And Adonijah slew sheep and oxen and fat cattle by the stone of Zoheleth, which is by Enrogel, and called all his brethren the king's sons, and all the men of Judah the king's servants:
10ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.But Nathan the prophet, and Benaiah, and the mighty men, and Solomon his brother, he called not.
11ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?Wherefore Nathan spake unto Bathsheba the mother of Solomon, saying, Hast thou not heard that Adonijah the son of Haggith doth reign, and David our lord knoweth it not?
12ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.Now therefore come, let me, I pray thee, give thee counsel, that thou mayest save thine own life, and the life of thy son Solomon.
13ನೀನು ದಾವೀದನ ಬಳಿಗೆ ಹೋಗಿ ಅವ ನಿಗೆ--ಅರಸನಾದ, ನನ್ನ ಒಡೆಯನೇ, ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವದು ಯಾಕೆ ಎಂದು ಹೇಳು.Go and get thee in unto king David, and say unto him, Didst not thou, my lord, O king, swear unto thine handmaid, saying, Assuredly Solomon thy son shall reign after me, and he shall sit upon my throne? why then doth Adonijah reign?
14ಇಗೋ, ನೀನು ಇನ್ನೂ ಅರಸನ ಸಂಗಡ ಮಾತ ನಾಡುತ್ತಿರುವಾಗ ನಾನು ನಿನ್ನ ಹಿಂದೆಯೇ ಒಳಗೆ ಬಂದು ನಿನ್ನ ಮಾತು ಗಳನ್ನು ಸ್ಥಿರಮಾಡುವೆನು ಅಂದನು.Behold, while thou yet talkest there with the king, I also will come in after thee, and confirm thy words.
15ಆಗ ಬತ್ಷೆಬೆಳು ಕೊಠಡಿಯೊಳಗೆ ಅರಸನ ಬಳಿಗೆ ಹೋದಳು.And Bathsheba went in unto the king into the chamber: and the king was very old; and Abishag the Shunammite ministered unto the king.
16ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್‌ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು. ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು. ಅರಸನು--ನಿನಗೇನು ಬೇಕು ಅಂದನು.And Bathsheba bowed, and did obeisance unto the king. And the king said, What wouldest thou?
17ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.And she said unto him, My lord, thou swarest by the LORD thy God unto thine handmaid, saying, Assuredly Solomon thy son shall reign after me, and he shall sit upon my throne.
18ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.And now, behold, Adonijah reigneth; and now, my lord the king, thou knowest it not:
19ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.And he hath slain oxen and fat cattle and sheep in abundance, and hath called all the sons of the king, and Abiathar the priest, and Joab the captain of the host: but Solomon thy servant hath he not called.
20ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.And thou, my lord, O king, the eyes of all Israel are upon thee, that thou shouldest tell them who shall sit on the throne of my lord the king after him.
21ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.Otherwise it shall come to pass, when my lord the king shall sleep with his fathers, that I and my son Solomon shall be counted offenders.
22ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು;And, lo, while she yet talked with the king, Nathan the prophet also came in.
23ಆಗ ಅರಸನಿಗೆ--ಇಗೋ, ಪ್ರವಾದಿ ಯಾದ ನಾತಾನನು ಅಂದರು. ಅವನು ಒಳಗೆ ಅರಸನ ಮುಂದೆ ಬಂದಾಗ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡ ಬಿದ್ದನು. ಆಗ ನಾತಾನನು--ಓ ಅರಸನಾದ ನನ್ನ ಒಡೆಯನೇ,And they told the king, saying, Behold Nathan the prophet. And when he was come in before the king, he bowed himself before the king with his face to the ground.
24ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?And Nathan said, My lord, O king, hast thou said, Adonijah shall reign after me, and he shall sit upon my throne?
25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.For he is gone down this day, and hath slain oxen and fat cattle and sheep in abundance, and hath called all the king's sons, and the captains of the host, and Abiathar the priest; and, behold, they eat and drink before him, and say, God save king Adonijah.
26ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.But me, even me thy servant, and Zadok the priest, and Benaiah the son of Jehoiada, and thy servant Solomon, hath he not called.
27ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.Is this thing done by my lord the king, and thou hast not showed it unto thy servant, who should sit on the throne of my lord the king after him?
28ಆಗ ಅರಸನಾದ ದಾವೀದನು ಪ್ರತ್ಯುತ್ತರವಾಗಿ--ಬತ್ಷೆ ಬೆಳನ್ನು ನನ್ನ ಬಳಿಗೆ ಕರೆ ಅಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಿರುವಾಗ ಅರಸನು--ನಿಶ್ಚಯವಾಗಿThen king David answered and said, Call me Bathsheba. And she came into the king's presence, and stood before the king.
29ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂAnd the king sware, and said, As the LORD liveth, that hath redeemed my soul out of all distress,
30ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.Even as I sware unto thee by the LORD God of Israel, saying, Assuredly Solomon thy son shall reign after me, and he shall sit upon my throne in my stead; even so will I certainly do this day.
31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.Then Bathsheba bowed with her face to the earth, and did reverence to the king, and said, Let my lord king David live for ever.
32ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.And king David said, Call me Zadok the priest, and Nathan the prophet, and Benaiah the son of Jehoiada. And they came before the king.
33ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.The king also said unto them, Take with you the servants of your lord, and cause Solomon my son to ride upon mine own mule, and bring him down to Gihon:
34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.And let Zadok the priest and Nathan the prophet anoint him there king over Israel: and blow ye with the trumpet, and say, God save king Solomon.
35ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು.Then ye shall come up after him, that he may come and sit upon my throne; for he shall be king in my stead: and I have appointed him to be ruler over Israel and over Judah.
36ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.And Benaiah the son of Jehoiada answered the king, and said, Amen: the LORD God of my lord the king say so too.
37ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.As the LORD hath been with my lord the king, even so be he with Solomon, and make his throne greater than the throne of my lord king David.
38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.So Zadok the priest, and Nathan the prophet, and Benaiah the son of Jehoiada, and the Cherethites, and the Pelethites, went down, and caused Solomon to ride upon king David's mule, and brought him to Gihon.
39ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.And Zadok the priest took an horn of oil out of the tabernacle, and anointed Solomon. And they blew the trumpet; and all the people said, God save king Solomon.
40ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.And all the people came up after him, and the people piped with pipes, and rejoiced with great joy, so that the earth rent with the sound of them.
41ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.And Adonijah and all the guests that were with him heard it as they had made an end of eating. And when Joab heard the sound of the trumpet, he said, Wherefore is this noise of the city being in an uproar?
42ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು.And while he yet spake, behold, Jonathan the son of Abiathar the priest came; and Adonijah said unto him, Come in; for thou art a valiant man, and bringest good tidings.
43ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.And Jonathan answered and said to Adonijah, Verily our lord king David hath made Solomon king.
44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.And the king hath sent with him Zadok the priest, and Nathan the prophet, and Benaiah the son of Jehoiada, and the Cherethites, and the Pelethites, and they have caused him to ride upon the king's mule:
45ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.And Zadok the priest and Nathan the prophet have anointed him king in Gihon: and they are come up from thence rejoicing, so that the city rang again. This is the noise that ye have heard.
46ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.And also Solomon sitteth on the throne of the kingdom.
47ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.And moreover the king's servants came to bless our lord king David, saying, God make the name of Solomon better than thy name, and make his throne greater than thy throne. And the king bowed himself upon the bed.
48ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.And also thus said the king, Blessed be the LORD God of Israel, which hath given one to sit on my throne this day, mine eyes even seeing it.
49ಆಗ ಅದೋನೀ ಯನ ಸಂಗಡವಿದ್ದವರೆಲ್ಲರೂ ಹೆದರಿಕೊಂಡು ಎದ್ದು ತಮ್ಮ ತಮ್ಮ ಸ್ಥಳಗಳಿಗೆ ಹೋದರು.And all the guests that were with Adonijah were afraid, and rose up, and went every man his way.
50ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.And Adonijah feared because of Solomon, and arose, and went, and caught hold on the horns of the altar.
51ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.And it was told Solomon, saying, Behold, Adonijah feareth king Solomon: for, lo, he hath caught hold on the horns of the altar, saying, Let king Solomon swear unto me today that he will not slay his servant with the sword.
52ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.And Solomon said, If he will show himself a worthy man, there shall not an hair of him fall to the earth: but if wickedness shall be found in him, he shall die.
53ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.So king Solomon sent, and they brought him down from the altar. And he came and bowed himself to king Solomon: and Solomon said unto him, Go to thine house.