1 Kings 7:29
ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
And on | וְעַֽל | wĕʿal | veh-AL |
the borders | הַמִּסְגְּר֞וֹת | hammisgĕrôt | ha-mees-ɡeh-ROTE |
that | אֲשֶׁ֣ר׀ | ʾăšer | uh-SHER |
between were | בֵּ֣ין | bên | bane |
the ledges | הַשְׁלַבִּ֗ים | hašlabbîm | hahsh-la-BEEM |
lions, were | אֲרָי֤וֹת׀ | ʾărāyôt | uh-ra-YOTE |
oxen, | בָּקָר֙ | bāqār | ba-KAHR |
and cherubims: | וּכְרוּבִ֔ים | ûkĕrûbîm | oo-heh-roo-VEEM |
upon and | וְעַל | wĕʿal | veh-AL |
the ledges | הַשְׁלַבִּ֖ים | hašlabbîm | hahsh-la-BEEM |
base a was there | כֵּ֣ן | kēn | kane |
above: | מִמָּ֑עַל | mimmāʿal | mee-MA-al |
and beneath | וּמִתַּ֙חַת֙ | ûmittaḥat | oo-mee-TA-HAHT |
the lions | לַֽאֲרָי֣וֹת | laʾărāyôt | la-uh-ra-YOTE |
oxen and | וְלַבָּקָ֔ר | wĕlabbāqār | veh-la-ba-KAHR |
were certain additions | לֹי֖וֹת | lōyôt | loh-YOTE |
made of thin | מַֽעֲשֵׂ֥ה | maʿăśē | ma-uh-SAY |
work. | מוֹרָֽד׃ | môrād | moh-RAHD |
Cross Reference
Genesis 3:24
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
Revelation 4:6
ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
1 Peter 2:5
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
Hebrews 9:5
ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
Hosea 5:14
ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.
Ezekiel 41:18
ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ.
Ezekiel 10:14
ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
Ezekiel 1:10
ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
1 Kings 7:25
ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.
1 Kings 6:27
ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.
Exodus 37:7
ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
Exodus 25:18
ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
Revelation 5:5
ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.