1 Peter 2 - DBY (Kannada)
1 Laying aside therefore all malice and all guile and hypocrisies and envyings and all evil speakings,ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
2 as newborn babes desire earnestly the pure mental milk of the word, that by it ye may grow up to salvation,ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
3 if indeed ye have tasted that the Lord [is] good.ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
4 To whom coming, a living stone, cast away indeed as worthless by men, but with God chosen, precious,ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
5 yourselves also, as living stones, are being built up a spiritual house, a holy priesthood, to offer spiritual sacrifices acceptable to God by Jesus Christ.ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
6 Because it is contained in the scripture: Behold, I lay in Zion a corner stone, elect, precious: and he that believes on him shall not be put to shame.ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
7 To you therefore who believe [is] the preciousness; but to the disobedient, the stone which the builders cast away as worthless, this is become head of [the] corner,ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
8 and a stone of stumbling and rock of offence; [who] stumble at the word, being disobedient to which also they have been appointed.ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
9 But *ye* [are] a chosen race, a kingly priesthood, a holy nation, a people for a possession, that ye might set forth the excellencies of him who has called you out of darkness to his wonderful light;ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
10 who once [were] not a people, but now God's people; who were not enjoying mercy, but now have found mercy.ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
11 Beloved, I exhort [you], as strangers and sojourners, to abstain from fleshly lusts, which war against the soul;ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
12 having your conversation honest among the Gentiles, that [as to that] in which they speak against you as evildoers, they may through [your] good works, [themselves] witnessing [them], glorify God in [the] day of visitation.ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
13 Be in subjection [therefore] to every human institution for the Lord's sake; whether to [the] king as supreme,ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ
14 or to rulers as sent by him, for vengeance on evildoers, and praise to them that do well.ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
15 Because so is the will of God, that by well-doing ye put to silence the ignorance of senseless men;ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
16 as free, and not as having liberty as a cloak of malice, but as God's bondmen.ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
17 Shew honour to all, love the brotherhood, fear God, honour the king.ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
18 Servants, [be] subject with all fear to your masters, not only to the good and gentle, but also to the ill-tempered.ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.
19 For this [is] acceptable, if one, for conscience sake towards God, endure griefs, suffering unjustly.ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
20 For what glory [is it], if sinning and being buffeted ye shall bear [it]? but if, doing good and suffering, ye shall bear [it], this is acceptable with God.ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
21 For to this have ye been called; for Christ also has suffered for you, leaving you a model that ye should follow in his steps:ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
22 who did no sin, neither was guile found in his mouth;ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
23 who, [when] reviled, reviled not again; [when] suffering, threatened not; but gave [himself] over into the hands of him who judges righteously;ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
24 who himself bore our sins in his body on the tree, in order that, being dead to sins, we may live to righteousness: by whose stripes ye have been healed.ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.
25 For ye were going astray as sheep, but have now returned to the shepherd and overseer of your souls.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
Kannada Bible