1 Peter 3 - YLT (Kannada)
1 In like manner, the wives, be ye subject to your own husbands, that even if certain are disobedient to the word, through the conversation of the wives, without the word, they may be won,ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
2 having beheld your pure behaviour in fear,ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ.
3 whose adorning -- let it not be that which is outward, of plaiting of hair, and of putting around of things of gold, or of putting on of garments,ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
4 but -- the hidden man of the heart, in the incorruptible thing of the meek and quiet spirit, which is, before God, of great price,ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
5 for thus once also the holy women who did hope on God, were adorning themselves, being subject to their own husbands,ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
6 as Sarah was obedient to Abraham, calling him `sir,' of whom ye did become daughters, doing good, and not fearing any terror.ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
7 The husbands, in like manner, dwelling with `them', according to knowledge, as to a weaker vessel -- to the wife -- imparting honour, as also being heirs together of the grace of life, that your prayers be not hindered.ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
8 And finally, being all of one mind, having fellow-feeling, loving as brethren, compassionate, courteous,ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
9 not giving back evil for evil, or railing for railing, and on the contrary, blessing, having known that to this ye were called, that a blessing ye may inherit;ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
10 for `he who is willing to love life, and to see good days, let him guard his tongue from evil, and his lips -- not to speak guile;ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
11 let him turn aside from evil, and do good, let him seek peace and pursue it;ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
12 because the eyes of the Lord `are' upon the righteous, and His ears -- to their supplication, and the face of the Lord `is' upon those doing evil;'ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
13 and who `is' he who will be doing you evil, if of Him who is good ye may become imitators?ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
14 but if ye also should suffer because of righteousness, happy `are ye'! and of their fear be not afraid, nor be troubled,ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
15 and the Lord God sanctify in your hearts. And `be' ready always for defence to every one who is asking of you an account concerning the hope that `is' in you, with meekness and fear;ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
16 having a good conscience, that in that in which they speak against you as evil-doers, they may be ashamed who are traducing your good behaviour in Christ;ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
17 for `it is' better doing good, if the will of God will it, to suffer, than doing evil;ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
18 because also Christ once for sin did suffer -- righteous for unrighteous -- that he might lead us to God, having been put to death indeed, in the flesh, and having been made alive in the spirit,ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
19 in which also to the spirits in prison having gone he did preach,ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;
20 who sometime disbelieved, when once the long-suffering of God did wait, in days of Noah -- an ark being preparing -- in which few, that is, eight souls, were saved through water;ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
21 also to which an antitype doth now save us -- baptism, (not a putting away of the filth of flesh, but the question of a good conscience in regard to God,) through the rising again of Jesus Christ,ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).
22 who is at the right hand of God, having gone on to heaven -- messengers, and authorities, and powers, having been subjected to him.ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
Kannada Bible