Bible

2 Corinthians 2 - BBE (Kannada)

1 But it was my decision for myself, not to come again to you with sorrow.ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು.

2 For if I give you sorrow, who then will make me glad, but he who is made sad by me?ನಾನು ನಿಮ್ಮನ್ನು ದುಃಖ ಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿ ದ್ದಾರೆ? ನನ್ನಿಂದ ದುಃಖ ಹೊಂದಿದವನೇ ಹೊರತು ಬೇರೆ ಯಾರೂ ಇಲ್ಲವಲ್ಲಾ.

3 And I said this very thing in my letter, for fear that when I came I might have sorrow from those from whom it was right for me to have joy; being certain of this, that my joy is the joy of you all.ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.

4 For out of much trouble and pain of heart and much weeping I sent my letter to you; not to give you sorrow, but so that you might see how great is the love which I have to you.ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.

5 But if anyone has been a cause of sorrow, he has been so, not to me only, but in some measure to all of you (I say this that I may not be over-hard on you).ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.

6 Let it be enough for such a man to have undergone the punishment which the church put on him;ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.

7 So that now, on the other hand, it is right for him to have forgiveness and comfort from you, for fear that his sorrow may be over-great.ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.

8 For which cause my desire is that you will make your love to him clear by your acts.ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

9 And for the same reason I sent you a letter so that I might be certain of your desire to do my orders in all things.ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.

10 But if you give forgiveness to anyone, I do the same: for if I have given forgiveness for anything, I have done it because of you, in the person of Christ;ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.

11 So that Satan may not get the better of us: for we are not without knowledge of his designs.ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.

12 Now when I came to Troas for the good news of Christ, and there was an open door for me in the Lord,ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.

13 I had no rest in my spirit because Titus my brother was not there: so I went away from them, and came into Macedonia.ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.

14 But praise be to God who makes us strong to overcome in Christ, and makes clear through us in every place the value of the knowledge of him.ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;

15 For we are a sweet perfume of Christ to God in those who are getting salvation and in those who are going to destruction;ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.

16 To the one it is a perfume of death to death; to the other a perfume of life to life. And who is enough for such things?ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?

17 For we are not like the great number who make use of the word of God for profit: but our words are true, as from God, being said as before God in Christ.ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.

Kannada Bible