Bible

2 Corinthians 9 - WEB (Kannada)

1 It is indeed unnecessary for me to write to you concerning the service to the saints,ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.

2 for I know your readiness, of which I boast on your behalf to them of Macedonia, that Achaia has been prepared for a year past. Your zeal has stirred up very many of them.ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.

3 But I have sent the brothers that our boasting on your behalf may not be in vain in this respect, that, just as I said, you may be prepared,ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.

4 so that I won't by any means, if there come with me any of Macedonia and find you unprepared, we (to say nothing of you) should be disappointed in this confident boasting.ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;

5 I thought it necessary therefore to entreat the brothers that they would go before to you, and arrange ahead of time the generous gift that you promised before, that the same might be ready as a matter of generosity, and not of greediness.ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.

6 Remember this: he who sows sparingly will also reap sparingly. He who sows bountifully will also reap bountifully.ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.

7 Let each man give according as he has determined in his heart; not grudgingly, or under compulsion; for God loves a cheerful giver.ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.

8 And God is able to make all grace abound to you, that you, always having all sufficiency in everything, may abound to every good work.ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.

9 As it is written, "He has scattered abroad, he has given to the poor. His righteousness remains forever."(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.

10 Now may he who supplies seed to the sower and bread for food, supply and multiply your seed for sowing, and increase the fruits of your righteousness;ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)

11 you being enriched in everything to all liberality, which works through us thanksgiving to God.ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.

12 For this service of giving that you perform not only makes up for lack among the saints, but abounds also through many givings of thanks to God;ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.

13 seeing that through the proof given by this service, they glorify God for the obedience of your confession to the Gospel of Christ, and for the liberality of your contribution to them and to all;ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.

14 while they themselves also, with supplication on your behalf, yearn for you by reason of the exceeding grace of God in you.ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.

15 Now thanks be to God for his unspeakable gift!ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.

Kannada Bible