2 John 1 - DBY (Kannada)
1 The elder to [the] elect lady and her children, whom *I* love in truth, and not *I* only but also all who have known the truth,ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
2 for the truth's sake which abides in us and shall be with us to eternity.ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
3 Grace shall be with you, mercy, peace from God [the] Father, and from [the] Lord Jesus Christ, the Son of the Father, in truth and love.ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.
4 I rejoiced greatly that I have found of thy children walking in truth, as we have received commandment from the Father.ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
5 And now I beseech thee, lady, not as writing to thee a new commandment, but that which we have had from [the] beginning, that we should love one another.ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
6 And this is love, that we should walk according to his commandments. This is the commandment, according as ye have heard from the beginning, that ye might walk in it.ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
7 For many deceivers have gone out into the world, they who do not confess Jesus Christ coming in flesh -- this is the deceiver and the antichrist.ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
8 See to yourselves, that we may not lose what we have wrought, but may receive full wages.ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
9 Whosoever goes forward and abides not in the doctrine of the Christ has not God. He that abides in the doctrine, *he* has both the Father and the Son.ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
10 If any one come to you and bring not this doctrine, do not receive him into [the] house, and greet him not;ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
11 for he who greets him partakes in his wicked works.ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
12 Having many things to write to you, I would not with paper and ink; but hope to come to you, and to speak mouth to mouth, that our joy may be full.ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.
13 The children of thine elect sister greet thee.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
Kannada Bible