2 John 1 - YLT (Kannada)
1 The Elder to the choice Kyria, and to her children, whom I love in truth, and not I only, but also all those having known the truth,ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
2 because of the truth that is remaining in us, and with us shall be to the age,ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
3 there shall be with you grace, kindness, peace, from God the Father, and from the Lord Jesus Christ, the Son of the Father, in truth and love.ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.
4 I rejoiced exceedingly that I have found of thy children walking in truth, even as a command we did receive from the Father;ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
5 and now I beseech thee, Kyria, not as writing to thee a new command, but which we had from the beginning, that we may love one another,ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
6 and this is the love, that we may walk according to His commands; this is the command, even as ye did hear from the beginning, that in it ye may walk,ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
7 because many leading astray did enter into the world, who are not confessing Jesus Christ coming in flesh; this one is he who is leading astray, and the antichrist.ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
8 See to yourselves that ye may not lose the things that we wrought, but a full reward may receive;ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
9 every one who is transgressing, and is not remaining in the teaching of the Christ, hath not God; he who is remaining in the teaching of the Christ, this one hath both the Father and the Son;ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
10 if any one doth come unto you, and this teaching doth not bear, receive him not into the house, and say not to him, `Hail!'ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
11 for he who is saying to him, `Hail,' hath fellowship with his evil works.ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
12 Many things having to write to you, I did not intend through paper and ink, but I hope to come unto you, and speak mouth to mouth, that our joy may be full;ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.
13 salute thee do the children of thy choice sister. Amen.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
Kannada Bible