Bible

2 Peter 3 - DBY (Kannada)

1 This, a second letter, beloved, I already write to you, in [both] which I stir up, in the way of putting you in remembrance, your pure mind,ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.

2 to be mindful of the words spoken before by the holy prophets, and of the commandment of the Lord and Saviour by your apostles;ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.

3 knowing this first, that there shall come at [the] close of the days mockers with mocking, walking according to their own lusts,ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--

4 and saying, Where is the promise of his coming? for from the time the fathers fell asleep all things remain thus from [the] beginning of [the] creation.ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.

5 For this is hidden from them through their own wilfulness, that heavens were of old, and an earth, having its subsistence out of water and in water, by the word of God,ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ

6 through which [waters] the then world, deluged with water, perished.ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.

7 But the present heavens and the earth by his word are laid up in store, kept for fire unto a day of judgment and destruction of ungodly men.ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.

8 But let not this one thing be hidden from you, beloved, that one day with [the] Lord [is] as a thousand years, and a thousand years as one day.ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.

9 [The] Lord does not delay his promise, as some account of delay, but is longsuffering towards you, not willing that any should perish, but that all should come to repentance.ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ

10 But the day of [the] Lord will come as a thief, in which the heavens will pass away with a rushing noise, and [the] elements, burning with heat, shall be dissolved, and [the] earth and the works in it shall be burnt up.ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.

11 All these things then being to be dissolved, what ought ye to be in holy conversation and godliness,ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.

12 waiting for and hastening the coming of the day of God, by reason of which [the] heavens, being on fire, shall be dissolved, and [the] elements, burning with heat, shall melt?ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?

13 But, according to his promise, we wait for new heavens and a new earth, wherein dwells righteousness.ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.

14 Wherefore, beloved, as ye wait for these things, be diligent to be found of him in peace, without spot and blameless;ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.

15 and account the longsuffering of our Lord [to be] salvation; according as our beloved brother Paul also has written to you according to the wisdom given to him,ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.

16 as also in all [his] epistles, speaking in them of these things; among which some things are hard to be understood, which the untaught and ill-established wrest, as also the other scriptures, to their own destruction.ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ

17 *Ye* therefore, beloved, knowing [these] things before, take care lest, being led away along with the error of the wicked, ye should fall from your own stedfastness:ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.

18 but grow in grace, and in [the] knowledge of our Lord and Saviour Jesus Christ. To him [be] glory both now and to [the] day of eternity. Amen.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್‌.

Kannada Bible