Bible

2 Timothy 2 - WEB (Kannada)

1 You therefore, my child, be strengthened in the grace that is in Christ Jesus.ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.

2 The things which you have heard from me among many witnesses, commit the same to faithful men, who will be able to teach others also.ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.

3 You therefore must endure hardship, as a good soldier of Christ Jesus.ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.

4 No soldier on service entangles himself in the affairs of life, that he may please him who enrolled him as a soldier.ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.

5 Also, if anyone competes in athletics, he isn't crowned unless he has competed by the rules.ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.

6 The farmers who labor must be the first to get a share of the crops.ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.

7 Consider what I say, and may the Lord give you understanding in all things.ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.

8 Remember Jesus Christ, risen from the dead, of the seed of David, according to my Gospel,ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.

9 in which I suffer hardship to the point of chains as a criminal. But God's word isn't chained.ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

10 Therefore I endure all things for the chosen ones' sake, that they also may obtain the salvation which is in Christ Jesus with eternal glory.ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.

11 This saying is faithful: For if we died with him, We will also live with him.ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.

12 If we endure, We will also reign with him. If we deny him, He also will deny us.ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.

13 If we are faithless, He remains faithful. He can't deny himself.ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.

14 Remind them of these things, charging them in the sight of the Lord, that they don't argue about words, to no profit, to the subverting of those who hear.ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.

15 Give diligence to present yourself approved by God, a workman who doesn't need to be ashamed, properly handling the Word of Truth.ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.

16 But shun empty chatter, for they will proceed further in ungodliness,ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.

17 and their word will consume like gangrene, of whom is Hymenaeus and Philetus;ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;

18 men who have erred concerning the truth, saying that the resurrection is already past, and overthrowing the faith of some.ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.

19 However God's firm foundation stands, having this seal, "The Lord knows those who are his," and, "Let every one who names the name of the Lord{TR reads "Christ" instead of "the Lord"} depart from unrighteousness."ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

20 Now in a great house there are not only vessels of gold and of silver, but also of wood and of clay. Some are for honor, and some for dishonor.ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.

21 If anyone therefore purges himself from these, he will be a vessel for honor, sanctified, and suitable for the master's use, prepared for every good work.ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.

22 Flee from youthful lusts; but pursue righteousness, faith, love, and peace with those who call on the Lord out of a pure heart.ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.

23 But refuse foolish and ignorant questionings, knowing that they generate strife.ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

24 The Lord's servant must not quarrel, but be gentle towards all, able to teach, patient,ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.

25 in gentleness correcting those who oppose him: perhaps God may give them repentance leading to a full knowledge of the truth,ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.

26 and they may recover themselves out of the devil's snare, having been taken captive by him to his will.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.

Kannada Bible