Acts 11 - ASV (Kannada)
1 Now the apostles and the brethren that were in Judaea heard that the Gentiles also had received the word of God.ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
2 And when Peter was come up to Jerusalem, they that were of the circumcision contended with him,ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--
3 saying, Thou wentest in to men uncircumcised, and didst eat with them.ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
4 But Peter began, and expounded `the matter' unto them in order, saying,ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--
5 I was in the city of Joppa praying: and in a trance I saw a vision, a certain vessel descending, as it were a great sheet let down from heaven by four corners; and it came even unto me:ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
6 upon which when I had fastened mine eyes, I considered, and saw the fourfooted beasts of the earth and wild beasts and creeping things and birds of the heaven.ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.
7 And I heard also a voice saying unto me, Rise, Peter; kill and eat.ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.
8 But I said, Not so, Lord: for nothing common or unclean hath ever entered into my mouth.ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;
9 But a voice answered the second time out of heaven, What God hath cleansed, make not thou common.ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.
10 And this was done thrice: and all were drawn up again into heaven.ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
11 And behold, forthwith three men stood before the house in which we were, having been sent from Caesarea unto me.ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
12 And the Spirit bade me go with them, making no distinction. And these six brethren also accompanied me; and we entered into the man's house:ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
13 and he told us how he had seen the angel standing in his house, and saying, Send to Joppa, and fetch Simon, whose surname is Peter;ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;
14 who shall speak unto thee words, whereby thou shalt be saved, thou and all thy house.ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
15 And as I began to speak, the Holy Spirit fell on them, even as on us at the beginning.ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
16 And I remembered the word of the Lord, how he said, John indeed baptized with water; but ye shall be baptized in the Holy Spirit.ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
17 If then God gave unto them the like gift as `he did' also unto us, when we believed on the Lord Jesus Christ, who was I, that I could withstand God?ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
18 And when they heard these things, they held their peace, and glorified God, saying, Then to the Gentiles also hath God granted repentance unto life.ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
19 They therefore that were scattered abroad upon the tribulation that arose about Stephen travelled as far as Phoenicia, and Cyprus, and Antioch, speaking the word to none save only to Jews.ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
20 But there were some of them, men of Cyprus and Cyrene, who, when they were come to Antioch, spake unto the Greeks also, preaching the Lord Jesus.ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
21 And the hand of the Lord was with them: and a great number that believed turned unto the Lord.ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
22 And the report concerning them came to the ears of the church which was in Jerusalem: and they sent forth Barnabas as far as Antioch:ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
23 who, when he was come, and had seen the grace of God, was glad; and he exhorted them all, that with purpose of heart they would cleave unto the Lord:ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
24 for he was a good man, and full of the Holy Spirit and of faith: and much people was added unto the Lord.ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
25 And he went forth to Tarsus to seek for Saul;ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
26 and when he had found him, he brought him unto Antioch. And it came to pass, that even for a whole year they were gathered together with the church, and taught much people, and that the disciples were called Christians first in Antioch.ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
27 Now in these days there came down prophets from Jerusalem unto Antioch.ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
28 And there stood up one of them named Agabus, and signified by the Spirit that there should be a great famine over all the world: which came to pass in the days of Claudius.ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
29 And the disciples, every man according to his ability, determined to send relief unto the brethren that dwelt in Judea:ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.
30 which also they did, sending it to the elders by the hand of Barnabas and Saul.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
Kannada Bible