Bible

Acts 11 - WEB (Kannada)

1 Now the apostles and the brothers{The word for "brothers" here and where context allows may also be correctly translated "brothers and sisters" or "siblings."} who were in Judea heard that the Gentiles had also received the word of God.ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.

2 When Peter had come up to Jerusalem, those who were of the circumcision contended with him,ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--

3 saying, "You went in to uncircumcised men, and ate with them!"ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.

4 But Peter began, and explained to them in order, saying,ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--

5 "I was in the city of Joppa praying, and in a trance I saw a vision: a certain container descending, like it was a great sheet let down from heaven by four corners. It came as far as me.ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.

6 When I had looked intently at it, I considered, and saw the four-footed animals of the earth, wild animals, creeping things, and birds of the sky.ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.

7 I also heard a voice saying to me, 'Rise, Peter, kill and eat!'ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.

8 But I said, 'Not so, Lord, for nothing unholy or unclean has ever entered into my mouth.'ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;

9 But a voice answered me the second time out of heaven, 'What God has cleansed, don't you call unclean.'ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.

10 This was done three times, and all were drawn up again into heaven.ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.

11 Behold, immediately three men stood before the house where I was, having been sent from Caesarea to me.ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.

12 The Spirit told me to go with them, without discriminating. These six brothers also accompanied me, and we entered into the man's house.ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.

13 He told us how he had seen the angel standing in his house, and saying to him, 'Send to Joppa, and get Simon, whose surname is Peter,ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;

14 who will speak to you words by which you will be saved, you and all your house.'ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.

15 As I began to speak, the Holy Spirit fell on them, even as on us at the beginning.ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.

16 I remembered the word of the Lord, how he said, 'John indeed baptized in water, but you will be baptized in the Holy Spirit.'ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.

17 If then God gave to them the same gift as us, when we believed in the Lord Jesus Christ, who was I, that I could withstand God?"ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.

18 When they heard these things, they held their peace, and glorified God, saying, "Then God has also granted to the Gentiles repentance to life!"ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

19 They therefore who were scattered abroad by the oppression that arose about Stephen traveled as far as Phoenicia, Cyprus, and Antioch, speaking the word to no one except to Jews only.ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.

20 But there were some of them, men of Cyprus and Cyrene, who, when they had come to Antioch, spoke to the Greeks, preaching the Lord Jesus.ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.

21 The hand of the Lord was with them, and a great number believed and turned to the Lord.ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.

22 The report concerning them came to the ears of the assembly which was in Jerusalem. They sent out Barnabas to go as far as Antioch,ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.

23 who, when he had come, and had seen the grace of God, was glad. He exhorted them all, that with purpose of heart they should remain near to the Lord.ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.

24 For he was a good man, and full of the Holy Spirit and of faith, and many people were added to the Lord.ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.

25 Barnabas went out to Tarsus to look for Saul.ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ

26 When he had found him, he brought him to Antioch. It happened, that for a whole year they were gathered together with the assembly, and taught many people. The disciples were first called Christians in Antioch.ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.

27 Now in these days, prophets came down from Jerusalem to Antioch.ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.

28 One of them named Agabus stood up, and indicated by the Spirit that there should be a great famine all over the world, which also happened in the days of Claudius.ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.

29 As any of the disciples had plenty, each determined to send relief to the brothers who lived in Judea;ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.

30 which they also did, sending it to the elders by the hands of Barnabas and Saul.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.

Kannada Bible