Acts 15 - ASV (Kannada)
1 And certain men came down from Judaea and taught the brethren, `saying', Except ye be circumcised after the custom of Moses, ye cannot be saved.ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
2 And when Paul and Barnabas had no small dissension and questioning with them, `the brethren' appointed that Paul and Barnabas, and certain other of them, should go up to Jerusalem unto the apostles and elders about this question.ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
3 They therefore, being brought on their way by the church, passed through both Phoenicia and Samaria, declaring the conversion of the Gentiles: and they caused great joy unto all the brethren.ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
4 And when they were come to Jerusalem, they were received of the church and the apostles and the elders, and they rehearsed all things that God had done with them.ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
5 But there rose up certain of the sect of the Pharisees who believed, saying, It is needful to circumcise them, and to charge them to keep the law of Moses.ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
6 And the apostles and the elders were gathered together to consider of this matter.ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
7 And when there had been much questioning, Peter rose up, and said unto them, Brethren, ye know that a good while ago God made choice among you, that by my mouth the Gentiles should hear the word of the gospel, and believe.ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
8 And God, who knoweth the heart, bare them witness, giving them the Holy Spirit, even as he did unto us;ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
9 and he made no distinction between us and them, cleansing their hearts by faith.ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
10 Now therefore why make ye trial of God, that ye should put a yoke upon the neck of the disciples which neither our fathers nor we were able to bear?ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
11 But we believe that we shall be saved through the grace of the Lord Jesus, in like manner as they.ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
12 And all the multitude kept silence; and they hearkened unto Barnabas and Paul rehearsing what signs and wonders God had wrought among the Gentiles through them.ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
13 And after they had held their peace, James answered, saying, Brethren, hearken unto me:ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
14 Symeon hath rehearsed how first God visited the Gentiles, to take out of them a people for his name.ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15 And to this agree the words of the prophets; as it is written,ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ--
16 After these things I will return, And I will build again the tabernacle of David, which is fallen; And I will build again the ruins thereof, And I will set it up:ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
17 That the residue of men may seek after the Lord, And all the Gentiles, upon whom my name is called,ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
18 Saith the Lord, who maketh these things known from of old.ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
19 Wherefore my judgment is, that we trouble not them that from among the Gentiles turn to God;ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
20 but that we write unto them, that they abstain from the pollutions of idols, and from fornication, and from what is strangled, and from blood.ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
21 For Moses from generations of old hath in every city them that preach him, being read in the synagogues every sabbath.ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
22 Then it seemed good to the apostles and the elders, with the whole church, to choose men out of their company, and send them to Antioch with Paul and Barnabas; `namely', Judas called Barsabbas, and Silas, chief men among the brethren:ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
23 and they wrote `thus' by them, The apostles and the elders, brethren, unto the brethren who are of the Gentiles in Antioch and Syria and Cilicia, greeting:ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
24 Forasmuch as we have heard that certain who went out from us have troubled you with words, subverting your souls; to whom we gave no commandment;ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
25 it seemed good unto us, having come to one accord, to choose out men and send them unto you with our beloved Barnabas and Paul,ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
26 men that have hazarded their lives for the name of our Lord Jesus Christ.ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.
27 We have sent therefore Judas and Silas, who themselves also shall tell you the same things by word of mouth.ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.
28 For it seemed good to the Holy Spirit, and to us, to lay upon you no greater burden than these necessary things:ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
29 that ye abstain from things sacrificed to idols, and from blood, and from things strangled, and from fornication; from which if ye keep yourselves, it shall be well with you. Fare ye well.ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
30 So they, when they were dismissed, came down to Antioch; and having gathered the multitude together, they delivered the epistle.ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
31 And when they had read it, they rejoiced for the consolation.ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
32 And Judas and Silas, being themselves also prophets, exhorted the brethren with many words, and confirmed them.ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
33 And after they had spent some time `there', they were dismissed in peace from the brethren unto those that had sent them forth.ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
34 `But it seemed good unto Silas to abide there.'ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು.
35 But Paul and Barnabas tarried in Antioch, teaching and preaching the word of the Lord, with many others also.ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
36 And after some days Paul said unto Barnabas, Let us return now and visit the brethren in every city wherein we proclaimed the word of the Lord, `and see' how they fare.ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
37 And Barnabas was minded to take with them John also, who was called Mark.ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
38 But Paul thought not good to take with them him who withdrew from them from Pamphylia, and went not with them to the work.ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
39 And there arose a sharp contention, so that they parted asunder one from the other, and Barnabas took Mark with him, and sailed away unto Cyprus;ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
40 but Paul choose Silas, and went forth, being commended by the brethren to the grace of the Lord.ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.
41 And he went through Syria and Cilicia, confirming the churches.ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
Kannada Bible