Acts 17 - DBY (Kannada)
1 And having journeyed through Amphipolis and Apollonia, they came to Thessalonica, where was the synagogue of the Jews.ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
2 And according to Paul's custom he went in among them, and on three sabbaths reasoned with them from the scriptures,ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
3 opening and laying down that the Christ must have suffered and risen up from among the dead, and that this is the Christ, Jesus whom *I* announce to you.ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
4 And some of them believed, and joined themselves to Paul and Silas, and of the Greeks who worshipped, a great multitude, and of the chief women not a few.ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
5 But the Jews having been stirred up to jealousy, and taken to [themselves] certain wicked men of the lowest rabble, and having got a crowd together, set the city in confusion; and having beset the house of Jason sought to bring them out to the people;ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
6 and not having found them, dragged Jason and certain brethren before the politarchs, crying out, These [men] that have set the world in tumult, are come here also,ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
7 whom Jason has received; and these all do contrary to the decrees of Caesar, saying, that there is another king, Jesus.ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
8 And they troubled the crowd and the politarchs when they heard these things.ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
9 And having taken security of Jason and the rest, they let them go.ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.
10 But the brethren immediately sent away, in the night, Paul and Silas to Berea; who, being arrived, went away into the synagogue of the Jews.ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
11 And these were more noble than those in Thessalonica, receiving the word with all readiness of mind, daily searching the scriptures if these things were so.ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
12 Therefore many from among them believed, and of Grecian women of the upper classes and men not a few.ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
13 But when the Jews from Thessalonica knew that the word of God was announced in Berea also by Paul, they came there also, stirring up the crowds.ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
14 And then immediately the brethren sent away Paul to go as to the sea; but Silas and Timotheus abode there.ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
15 But they that conducted Paul brought him as far as Athens; and, having received a commandment to Silas and Timotheus, that they should come to him as quickly as possible, they departed.ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
16 But in Athens, while Paul was waiting for them, his spirit was painfully excited in him seeing the city given up to idolatry.ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
17 He reasoned therefore in the synagogue with the Jews, and those who worshipped, and in the market-place every day with those he met with.ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
18 But some also of the Epicurean and Stoic philosophers attacked him. And some said, What would this chatterer say? and some, He seems to be an announcer of foreign demons, because he announced the glad tidings of Jesus and the resurrection [to them].ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
19 And having taken hold on him they brought [him] to Areopagus, saying, Might we know what this new doctrine which is spoken by thee [is]?ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
20 For thou bringest certain strange things to our ears. We wish therefore to know what these things may mean.ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
21 Now all [the] Athenians and the strangers sojourning there spent their time in nothing else than to tell and to hear the news.(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
22 And Paul standing in the midst of Areopagus said, Athenians, in every way I see you given up to demon worship;ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
23 for, passing through and beholding your shrines, I found also an altar on which was inscribed, To the unknown God. Whom therefore ye reverence, not knowing [him], him I announce to you.ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
24 The God who has made the world and all things which are in it, *he*, being Lord of heaven and earth, does not dwell in temples made with hands,ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
25 nor is served by men's hands as needing something, himself giving to all life and breath and all things;ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
26 and has made of one blood every nation of men to dwell upon the whole face of the earth, having determined ordained times and the boundaries of their dwelling,ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
27 that they may seek God; if indeed they might feel after him and find him, although he is not far from each one of us:ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
28 for in him we live and move and exist; as also some of the poets amongst you have said, For we are also his offspring.ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
29 Being therefore [the] offspring of God, we ought not to think that which is divine to be like gold or silver or stone, [the] graven form of man's art and imagination.ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
30 God therefore, having overlooked the times of ignorance, now enjoins men that they shall all everywhere repent,ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
31 because he has set a day in which he is going to judge the habitable earth in righteousness by [the] man whom he has appointed, giving the proof [of it] to all [in] having raised him from among [the] dead.ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
32 And when they heard [of the] resurrection of the dead, some mocked, and some said, We will hear thee again also concerning this.ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
33 Thus Paul went out of their midst.ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
34 But some men joining themselves to him believed; among whom also was Dionysius the Areopagite, and a woman by name Damaris, and others with them.ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
Kannada Bible