Bible

Amos 8 - DBY (Kannada)

1 Thus did Jehovah shew unto me; and behold, a basket of summer-fruit.ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.

2 And he said, Amos, what seest thou? And I said, A basket of summer-fruit. And Jehovah said unto me, The end is come upon my people Israel: I will not again pass by them any more.ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.

3 And the songs of the palace shall be howlings in that day, saith the Lord Jehovah. The dead bodies shall be many; in every place they shall be cast forth. Silence!ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.

4 Hear this, ye that pant after the needy, even to cause to fail the poor of the land,ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.

5 saying, When will the new moon be gone, that we may sell corn? and the sabbath, that we may set forth wheat? making the ephah small and the shekel great, and falsifying the balances for deceit:ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ

6 that we may buy the poor for silver, and the needy for a pair of shoes; and that we may sell the refuse of the wheat.ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?

7 Jehovah hath sworn by the glory of Jacob, Certainly I will never forget any of their works.ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.

8 Shall not the land tremble for this, and every one mourn that dwelleth therein? And it shall wholly rise up like the Nile; and it shall surge and sink down, as the river of Egypt.ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.

9 And it shall come to pass in that day, saith the Lord Jehovah, that I will cause the sun to go down at noon, and I will darken the land in the clear day.ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.

10 And I will turn your feasts into mourning, and all your songs into lamentation; and I will bring up sackcloth upon all loins, and baldness upon every head; and I will make it as the mourning for an only [son], and the end thereof as a bitter day.ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.

11 Behold, days come, saith the Lord Jehovah, when I will send a famine in the land; not a famine of bread, nor a thirst for water, but of hearing the words of Jehovah.ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.

12 And they shall wander from sea to sea, and from the north to the east; they shall run to and fro to seek the word of Jehovah, and shall not find it.ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.

13 In that day shall the fair virgins and the young men faint for thirst;ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.

14 they that swear by the sin of Samaria, and say, [As] thy god, O Dan, liveth! and, [As] the way of Beer-sheba liveth! even they shall fall, and never rise up again.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.

Kannada Bible