Daniel 5
1 ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
2 ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.
3 ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
4 ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
5 ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
6 ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
7 ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
8 ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
9 ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.
10 ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
11 ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
12 ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
13 ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
14 ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
15 ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
16 ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
17 ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.
18 ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
19 ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
20 ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
21 ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
22 ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
23 ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
24 ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.
25 ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್,
26 ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ;
27 ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.
28 ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
29 ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
30 ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.
31 ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
1 Belshazzar the king made a great feast to a thousand of his lords, and drank wine before the thousand.
2 Belshazzar, whiles he tasted the wine, commanded to bring the golden and silver vessels which his father Nebuchadnezzar had taken out of the temple which was in Jerusalem; that the king, and his princes, his wives, and his concubines, might drink therein.
3 Then they brought the golden vessels that were taken out of the temple of the house of God which was at Jerusalem; and the king, and his princes, his wives, and his concubines, drank in them.
4 They drank wine, and praised the gods of gold, and of silver, of brass, of iron, of wood, and of stone.
5 In the same hour came forth fingers of a man’s hand, and wrote over against the candlestick upon the plaister of the wall of the king’s palace: and the king saw the part of the hand that wrote.
6 Then the king’s countenance was changed, and his thoughts troubled him, so that the joints of his loins were loosed, and his knees smote one against another.
7 The king cried aloud to bring in the astrologers, the Chaldeans, and the soothsayers. And the king spake, and said to the wise men of Babylon, Whosoever shall read this writing, and shew me the interpretation thereof, shall be clothed with scarlet, and have a chain of gold about his neck, and shall be the third ruler in the kingdom.
8 Then came in all the king’s wise men: but they could not read the writing, nor make known to the king the interpretation thereof.
9 Then was king Belshazzar greatly troubled, and his countenance was changed in him, and his lords were astonied.
10 Now the queen, by reason of the words of the king and his lords, came into the banquet house: and the queen spake and said, O king, live for ever: let not thy thoughts trouble thee, nor let thy countenance be changed:
11 There is a man in thy kingdom, in whom is the spirit of the holy gods; and in the days of thy father light and understanding and wisdom, like the wisdom of the gods, was found in him; whom the king Nebuchadnezzar thy father, the king, I say, thy father, made master of the magicians, astrologers, Chaldeans, and soothsayers;
12 Forasmuch as an excellent spirit, and knowledge, and understanding, interpreting of dreams, and shewing of hard sentences, and dissolving of doubts, were found in the same Daniel, whom the king named Belteshazzar: now let Daniel be called, and he will shew the interpretation.
13 Then was Daniel brought in before the king. And the king spake and said unto Daniel, Art thou that Daniel, which art of the children of the captivity of Judah, whom the king my father brought out of Jewry?
14 I have even heard of thee, that the spirit of the gods is in thee, and that light and understanding and excellent wisdom is found in thee.
15 And now the wise men, the astrologers, have been brought in before me, that they should read this writing, and make known unto me the interpretation thereof: but they could not shew the interpretation of the thing:
16 And I have heard of thee, that thou canst make interpretations, and dissolve doubts: now if thou canst read the writing, and make known to me the interpretation thereof, thou shalt be clothed with scarlet, and have a chain of gold about thy neck, and shalt be the third ruler in the kingdom.
17 Then Daniel answered and said before the king, Let thy gifts be to thyself, and give thy rewards to another; yet I will read the writing unto the king, and make known to him the interpretation.
18 O thou king, the most high God gave Nebuchadnezzar thy father a kingdom, and majesty, and glory, and honour:
19 And for the majesty that he gave him, all people, nations, and languages, trembled and feared before him: whom he would he slew; and whom he would he kept alive; and whom he would he set up; and whom he would he put down.
20 But when his heart was lifted up, and his mind hardened in pride, he was deposed from his kingly throne, and they took his glory from him:
21 And he was driven from the sons of men; and his heart was made like the beasts, and his dwelling was with the wild asses: they fed him with grass like oxen, and his body was wet with the dew of heaven; till he knew that the most high God ruled in the kingdom of men, and that he appointeth over it whomsoever he will.
22 And thou his son, O Belshazzar, hast not humbled thine heart, though thou knewest all this;
23 But hast lifted up thyself against the Lord of heaven; and they have brought the vessels of his house before thee, and thou, and thy lords, thy wives, and thy concubines, have drunk wine in them; and thou hast praised the gods of silver, and gold, of brass, iron, wood, and stone, which see not, nor hear, nor know: and the God in whose hand thy breath is, and whose are all thy ways, hast thou not glorified:
24 Then was the part of the hand sent from him; and this writing was written.
25 And this is the writing that was written, MENE, MENE, TEKEL, UPHARSIN.
26 This is the interpretation of the thing: MENE; God hath numbered thy kingdom, and finished it.
27 TEKEL; Thou art weighed in the balances, and art found wanting.
28 PERES; Thy kingdom is divided, and given to the Medes and Persians.
29 Then commanded Belshazzar, and they clothed Daniel with scarlet, and put a chain of gold about his neck, and made a proclamation concerning him, that he should be the third ruler in the kingdom.
30 In that night was Belshazzar the king of the Chaldeans slain.
31 And Darius the Median took the kingdom, being about threescore and two years old.
1 If thou wilt return, O Israel, saith the Lord, return unto me: and if thou wilt put away thine abominations out of my sight, then shalt thou not remove.
2 And thou shalt swear, The Lord liveth, in truth, in judgment, and in righteousness; and the nations shall bless themselves in him, and in him shall they glory.
3 For thus saith the Lord to the men of Judah and Jerusalem, Break up your fallow ground, and sow not among thorns.
4 Circumcise yourselves to the Lord, and take away the foreskins of your heart, ye men of Judah and inhabitants of Jerusalem: lest my fury come forth like fire, and burn that none can quench it, because of the evil of your doings.
5 Declare ye in Judah, and publish in Jerusalem; and say, Blow ye the trumpet in the land: cry, gather together, and say, Assemble yourselves, and let us go into the defenced cities.
6 Set up the standard toward Zion: retire, stay not: for I will bring evil from the north, and a great destruction.
7 The lion is come up from his thicket, and the destroyer of the Gentiles is on his way; he is gone forth from his place to make thy land desolate; and thy cities shall be laid waste, without an inhabitant.
8 For this gird you with sackcloth, lament and howl: for the fierce anger of the Lord is not turned back from us.
9 And it shall come to pass at that day, saith the Lord, that the heart of the king shall perish, and the heart of the princes; and the priests shall be astonished, and the prophets shall wonder.
10 Then said I, Ah, Lord God! surely thou hast greatly deceived this people and Jerusalem, saying, Ye shall have peace; whereas the sword reacheth unto the soul.
11 At that time shall it be said to this people and to Jerusalem, A dry wind of the high places in the wilderness toward the daughter of my people, not to fan, nor to cleanse,
12 Even a full wind from those places shall come unto me: now also will I give sentence against them.
13 Behold, he shall come up as clouds, and his chariots shall be as a whirlwind: his horses are swifter than eagles. Woe unto us! for we are spoiled.
14 O Jerusalem, wash thine heart from wickedness, that thou mayest be saved. How long shall thy vain thoughts lodge within thee?
15 For a voice declareth from Dan, and publisheth affliction from mount Ephraim.
16 Make ye mention to the nations; behold, publish against Jerusalem, that watchers come from a far country, and give out their voice against the cities of Judah.
17 As keepers of a field, are they against her round about; because she hath been rebellious against me, saith the Lord.
18 Thy way and thy doings have procured these things unto thee; this is thy wickedness, because it is bitter, because it reacheth unto thine heart.
19 My bowels, my bowels! I am pained at my very heart; my heart maketh a noise in me; I cannot hold my peace, because thou hast heard, O my soul, the sound of the trumpet, the alarm of war.
20 Destruction upon destruction is cried; for the whole land is spoiled: suddenly are my tents spoiled, and my curtains in a moment.
21 How long shall I see the standard, and hear the sound of the trumpet?
22 For my people is foolish, they have not known me; they are sottish children, and they have none understanding: they are wise to do evil, but to do good they have no knowledge.
23 I beheld the earth, and, lo, it was without form, and void; and the heavens, and they had no light.
24 I beheld the mountains, and, lo, they trembled, and all the hills moved lightly.
25 I beheld, and, lo, there was no man, and all the birds of the heavens were fled.
26 I beheld, and, lo, the fruitful place was a wilderness, and all the cities thereof were broken down at the presence of the Lord, and by his fierce anger.
27 For thus hath the Lord said, The whole land shall be desolate; yet will I not make a full end.
28 For this shall the earth mourn, and the heavens above be black: because I have spoken it, I have purposed it, and will not repent, neither will I turn back from it.
29 The whole city shall flee for the noise of the horsemen and bowmen; they shall go into thickets, and climb up upon the rocks: every city shall be forsaken, and not a man dwell therein.
30 And when thou art spoiled, what wilt thou do? Though thou clothest thyself with crimson, though thou deckest thee with ornaments of gold, though thou rentest thy face with painting, in vain shalt thou make thyself fair; thy lovers will despise thee, they will seek thy life.
31 For I have heard a voice as of a woman in travail, and the anguish as of her that bringeth forth her first child, the voice of the daughter of Zion, that bewaileth herself, that spreadeth her hands, saying, Woe is me now! for my soul is wearied because of murderers.