Bible

Daniel 6 - YLT (Kannada)

1 It hath been good before Darius, and he hath established over the kingdom satraps -- a hundred and twenty -- that they may be throughout the whole kingdom,ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.

2 and higher than they three presidents, of whom Daniel `is' first, that these satraps may give to them an account, and the king have no loss.ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು.

3 Then this Daniel hath been overseer over the presidents and satraps, because that an excellent spirit `is' in him, and the king hath thought to establish him over the whole kingdom.ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.

4 Then the presidents and satraps have been seeking to find a cause of complaint against Daniel concerning the kingdom, and any cause of complaint and corruption they are not able to find, because that he `is' faithful, and any error and corruption have not been found in him.ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.

5 Then these men are saying, `We do not find against this Daniel any cause of complaint, except we have found `it' against him in the law of his God.'ಆಗ ಆ ಮನುಷ್ಯರು --ಈ ದಾನಿಯೇಲನಿಗೆ ವಿರೋಧವಾಗಿ ಅವನ ದೇವರ ನ್ಯಾಯಪ್ರಮಾಣದಲ್ಲಿ ತಪ್ಪು ಸಿಗುವದೇ ಹೊರತು ನಮಗೆ ಇನ್ನೆಲ್ಲೂ ಸಿಗುವದಿಲ್ಲ ಎಂದು ಅಂದು ಕೊಂಡರು.

6 Then these presidents and satraps have assembled near the king, and thus they are saying to him: `O king Darius, to the ages live!ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.

7 Taken counsel have all the presidents of the kingdom, the prefects, and the satraps, the counsellors, and the governors, to establish a royal statute, and to strengthen an interdict, that any who seeketh a petition from any god and man until thirty days, save of thee, O king, is cast into a den of lions.ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.

8 Now, O king, thou dost establish the interdict, and sign the writing, that it is not to be changed, as a law of Media and Persia, that doth not pass away.'ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.

9 Therefore king Darius hath signed the writing and interdict.ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು.

10 And Daniel, when he hath known that the writing is signed, hath gone up to his house, and the window being opened for him, in his upper chamber, over-against Jerusalem, three times in a day he is kneeling on his knees, and praying, and confessing before his God, because that he was doing `it' before this.ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.

11 Then these men have assembled, and found Daniel praying and entreating grace before his God;ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.

12 then they have come near, yea, they are saying before the king concerning the king's interdict: `Hast thou not signed an interdict, that any man who seeketh from any god and man until thirty days, save of thee, O king, is cast into a den of lions?' Answered hath the king, and said, `The thing `is' certain as a law of Media and Persia, that doth not pass away.'ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.

13 Then they have answered, yea, they are saying before the king, that, `Daniel, who `is' of the sons of the Removed of Judah, hath not placed on thee, O king, `any' regard, nor on the interdict that thou hast signed, and three times in a day he is seeking his petition.'ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.

14 Then the king, when he hath heard the matter, is greatly displeased at himself, and on Daniel he hath set the heart to deliver him, and till the going up of the sun he was arranging to deliver him.ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.

15 Then these men have assembled near the king, and are saying to the king, `know, O king, that the law of Media and Persia `is': That any interdict and statute that the king doth establish is not to be changed.'ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.

16 Then the king hath said, and they have brought Daniel, and have cast `him' into a den of lions. The king hath answered and said to Daniel, `Thy God, whom thou art serving continually, Himself doth deliver thee.'ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.

17 And a stone hath been brought and placed at the mouth of the den, and the king hath sealed it with his signet, and with the signet of his great men, that the purpose be not changed concerning Daniel.ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.

18 Then hath the king gone to his palace, and he hath passed the night fasting, and dahavan have not been brought up before him, and his sleep hath fled `from' off him.ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.

19 Then doth the king rise in the early morning, at the light, and in haste to the den of lions he hath gone;ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.

20 and at his coming near to the den, to Daniel, with a grieved voice, he crieth. The king hath answered and said to Daniel, O Daniel, servant of the living God, thy God, whom thou art serving continually, is He able to deliver thee from the lions?'ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.

21 Then Daniel hath spoken with the king: `O king, to the ages live:ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.

22 my God hath sent His messenger, and hath shut the lions' mouths, and they have not injured me: because that before Him purity hath been found in me; and also before thee, O king, injury I have not done.'ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.

23 Then was the king very glad for him, and he hath commanded Daniel to be taken up out of the den, and Daniel hath been taken up out of the den, and no injury hath been found in him, because he hath believed in his God.ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.

24 And the king hath said, and they have brought those men who had accused Daniel, and to the den of lions they have cast them, they, their sons, and their wives; and they have not come to the lower part of the den till that the lions have power over them, and all their bones they have broken small.ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.

25 Then Darius the king hath written to all the peoples, nations, and languages, who are dwelling in all the land: `Your peace be great!ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.

26 From before me is made a decree, that in every dominion of my kingdom they are trembling and fearing before the God of Daniel, for He `is' the living God, and abiding to the ages, and His kingdom that which `is' not destroyed, and His dominion `is' unto the end.ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.

27 A deliverer, and rescuer, and doer of signs and wonders in the heavens and in earth `is' He who hath delivered Daniel from the paw of the lions.'ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.

28 And this Daniel hath prospered in the reign of Darius, and in the reign of Cyrus the Persian.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.

Kannada Bible