Bible

1 John 5 - WEB (Kannada)

1 Whoever believes that Jesus is the Christ is born of God. Whoever loves the father also loves the child who is born of him.ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.

2 By this we know that we love the children of God, when we love God and keep his commandments.ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.

3 For this is the love of God, that we keep his commandments. His commandments are not grievous.ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.

4 For whatever is born of God overcomes the world. This is the victory that has overcome the world: your faith.ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.

5 Who is he who overcomes the world, but he who believes that Jesus is the Son of God?ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?

6 This is he who came by water and blood, Jesus Christ; not with the water only, but with the water and the blood. It is the Spirit who testifies, because the Spirit is the truth.ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.

7 For there are three who testify{Only a few recent manuscripts add "in heaven: the Father, the Word, and the Holy Spirit; and these three are one. And there are three that testify on earth"}:ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.

8 the Spirit, and the water, and the blood; and the three agree as one.ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.

9 If we receive the witness of men, the witness of God is greater; for this is God's testimony which he has testified concerning his Son.ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.

10 He who believes in the Son of God has the testimony in himself. He who doesn't believe God has made him a liar, because he has not believed in the testimony that God has given concerning his Son.ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.

11 The testimony is this, that God gave to us eternal life, and this life is in his Son.ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.

12 He who has the Son has the life. He who doesn't have God's Son doesn't have the life.ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.

13 These things I have written to you who believe in the name of the Son of God, that you may know that you have eternal life, and that you may continue to believe in the name of the Son of God.ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.

14 This is the boldness which we have toward him, that, if we ask anything according to his will, he listens to us.ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.

15 And if we know that he listens to us, whatever we ask, we know that we have the petitions which we have asked of him.ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.

16 If anyone sees his brother sinning a sin not leading to death, he shall ask, and God will give him life for those who sin not leading to death. There is a sin leading to death. I don't say that he should make a request concerning this.ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ

17 All unrighteousness is sin, and there is a sin not leading to death.ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.

18 We know that whoever is born of God doesn't sin, but he who was born of God keeps himself, and the evil one doesn't touch him.ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.

19 We know that we are of God, and the whole world lies in the power of the evil one.ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.

20 We know that the Son of God has come, and has given us an understanding, that we know him who is true, and we are in him who is true, in his Son Jesus Christ. This is the true God, and eternal life.ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.

21 Little children, keep yourselves from idols.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್‌.

Kannada Bible