Hosea 4:19 in Kannada

Kannada Kannada Bible Hosea Hosea 4 Hosea 4:19

Hosea 4:19
ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.

Hosea 4:18Hosea 4

Hosea 4:19 in Other Translations

King James Version (KJV)
The wind hath bound her up in her wings, and they shall be ashamed because of their sacrifices.

American Standard Version (ASV)
The wind hath wrapped her up in its wings; and they shall be put to shame because of their sacrifices.

Bible in Basic English (BBE)
They are folded in the skirts of the wind; they will be shamed because of their offerings.

Darby English Bible (DBY)
The wind hath wrapped her up in its wings, and they shall be ashamed because of their sacrifices.

World English Bible (WEB)
The wind has wrapped her up in its wings; And they shall be disappointed because of their sacrifices.

Young's Literal Translation (YLT)
Distressed her hath wind with its wings, And they are ashamed of their sacrifices!

The
wind
צָרַ֥רṣārartsa-RAHR
hath
bound
her
up
ר֛וּחַrûaḥROO-ak

אוֹתָ֖הּʾôtāhoh-TA
wings,
her
in
בִּכְנָפֶ֑יהָbiknāpêhābeek-na-FAY-ha
ashamed
be
shall
they
and
וְיֵבֹ֖שׁוּwĕyēbōšûveh-yay-VOH-shoo
because
of
their
sacrifices.
מִזִּבְחוֹתָֽם׃mizzibḥôtāmmee-zeev-hoh-TAHM

Cross Reference

Isaiah 1:29
ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

Hosea 13:15
ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.

Jeremiah 51:1
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ.

Jeremiah 4:11
ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.

Zechariah 5:9
ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.

Hosea 12:1
ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.

Hosea 10:6
ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್‌ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.

Jeremiah 17:13
ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.

Jeremiah 3:24
ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.

Jeremiah 2:36
ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.

Jeremiah 2:26
ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.

Isaiah 42:17
ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.