1ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.And the LORD said unto Moses, Yet will I bring one plague more upon Pharaoh, and upon Egypt; afterwards he will let you go hence: when he shall let you go, he shall surely thrust you out hence altogether.
2ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು.Speak now in the ears of the people, and let every man borrow of his neighbor, and every woman of her neighbor, jewels of silver and jewels of gold.
3ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.And the LORD gave the people favor in the sight of the Egyptians. Moreover the man Moses was very great in the land of Egypt, in the sight of Pharaoh's servants, and in the sight of the people.
4ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.And Moses said, Thus saith the LORD, About midnight will I go out into the midst of Egypt:
5ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.And all the firstborn in the land of Egypt shall die, from the first born of Pharaoh that sitteth upon his throne, even unto the firstborn of the maidservant that is behind the mill; and all the firstborn of beasts.
6ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.And there shall be a great cry throughout all the land of Egypt, such as there was none like it, nor shall be like it any more.
7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.But against any of the children of Israel shall not a dog move his tongue, against man or beast: that ye may know how that the LORD doth put a difference between the Egyptians and Israel.
8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.And all these thy servants shall come down unto me, and bow down themselves unto me, saying, Get thee out, and all the people that follow thee: and after that I will go out. And he went out from Pharaoh in a great anger.
9ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.And the LORD said unto Moses, Pharaoh shall not hearken unto you; that my wonders may be multiplied in the land of Egypt.
10ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.And Moses and Aaron did all these wonders before Pharaoh: and the LORD hardened Pharaoh's heart, so that he would not let the children of Israel go out of his land.