Exodus 39
1 ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
2 ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
3 ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
4 (ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
5 ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
6 ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
7 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
8 ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
9 ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
10 ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
11 ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.
12 ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.
13 ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
14 ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು.
15 ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
16 ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.
17 ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು.
18 ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು.
19 ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು.
20 ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.
21 ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
22 ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
23 ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು.
24 ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
25 ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು.
26 ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
27 ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
28 ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
29 ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
30 ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
31 ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
32 ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.
33 ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
34 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
35 ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;
36 ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;
37 ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
38 ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
39 ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,
40 ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
41 ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
42 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.
43 ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
1 And of the blue, and purple, and scarlet, they made cloths of service, to do service in the holy place, and made the holy garments for Aaron; as the Lord commanded Moses.
2 And he made the ephod of gold, blue, and purple, and scarlet, and fine twined linen.
3 And they did beat the gold into thin plates, and cut it into wires, to work it in the blue, and in the purple, and in the scarlet, and in the fine linen, with cunning work.
4 They made shoulderpieces for it, to couple it together: by the two edges was it coupled together.
5 And the curious girdle of his ephod, that was upon it, was of the same, according to the work thereof; of gold, blue, and purple, and scarlet, and fine twined linen; as the Lord commanded Moses.
6 And they wrought onyx stones inclosed in ouches of gold, graven, as signets are graven, with the names of the children of Israel.
7 And he put them on the shoulders of the ephod, that they should be stones for a memorial to the children of Israel; as the Lord commanded Moses.
8 And he made the breastplate of cunning work, like the work of the ephod; of gold, blue, and purple, and scarlet, and fine twined linen.
9 It was foursquare; they made the breastplate double: a span was the length thereof, and a span the breadth thereof, being doubled.
10 And they set in it four rows of stones: the first row was a sardius, a topaz, and a carbuncle: this was the first row.
11 And the second row, an emerald, a sapphire, and a diamond.
12 And the third row, a ligure, an agate, and an amethyst.
13 And the fourth row, a beryl, an onyx, and a jasper: they were inclosed in ouches of gold in their inclosings.
14 And the stones were according to the names of the children of Israel, twelve, according to their names, like the engravings of a signet, every one with his name, according to the twelve tribes.
15 And they made upon the breastplate chains at the ends, of wreathen work of pure gold.
16 And they made two ouches of gold, and two gold rings; and put the two rings in the two ends of the breastplate.
17 And they put the two wreathen chains of gold in the two rings on the ends of the breastplate.
18 And the two ends of the two wreathen chains they fastened in the two ouches, and put them on the shoulderpieces of the ephod, before it.
19 And they made two rings of gold, and put them on the two ends of the breastplate, upon the border of it, which was on the side of the ephod inward.
20 And they made two other golden rings, and put them on the two sides of the ephod underneath, toward the forepart of it, over against the other coupling thereof, above the curious girdle of the ephod.
21 And they did bind the breastplate by his rings unto the rings of the ephod with a lace of blue, that it might be above the curious girdle of the ephod, and that the breastplate might not be loosed from the ephod; as the Lord commanded Moses.
22 And he made the robe of the ephod of woven work, all of blue.
23 And there was an hole in the midst of the robe, as the hole of an habergeon, with a band round about the hole, that it should not rend.
24 And they made upon the hems of the robe pomegranates of blue, and purple, and scarlet, and twined linen.
25 And they made bells of pure gold, and put the bells between the pomegranates upon the hem of the robe, round about between the pomegranates;
26 A bell and a pomegranate, a bell and a pomegranate, round about the hem of the robe to minister in; as the Lord commanded Moses.
27 And they made coats of fine linen of woven work for Aaron, and for his sons,
28 And a mitre of fine linen, and goodly bonnets of fine linen, and linen breeches of fine twined linen,
29 And a girdle of fine twined linen, and blue, and purple, and scarlet, of needlework; as the Lord commanded Moses.
30 And they made the plate of the holy crown of pure gold, and wrote upon it a writing, like to the engravings of a signet, HOLINESS TO THE LORD.
31 And they tied unto it a lace of blue, to fasten it on high upon the mitre; as the Lord commanded Moses.
32 Thus was all the work of the tabernacle of the tent of the congregation finished: and the children of Israel did according to all that the Lord commanded Moses, so did they.
33 And they brought the tabernacle unto Moses, the tent, and all his furniture, his taches, his boards, his bars, and his pillars, and his sockets,
34 And the covering of rams’ skins dyed red, and the covering of badgers’ skins, and the vail of the covering,
35 The ark of the testimony, and the staves thereof, and the mercy seat,
36 The table, and all the vessels thereof, and the shewbread,
37 The pure candlestick, with the lamps thereof, even with the lamps to be set in order, and all the vessels thereof, and the oil for light,
38 And the golden altar, and the anointing oil, and the sweet incense, and the hanging for the tabernacle door,
39 The brasen altar, and his grate of brass, his staves, and all his vessels, the laver and his foot,
40 The hangings of the court, his pillars, and his sockets, and the hanging for the court gate, his cords, and his pins, and all the vessels of the service of the tabernacle, for the tent of the congregation,
41 The cloths of service to do service in the holy place, and the holy garments for Aaron the priest, and his sons’ garments, to minister in the priest’s office.
42 According to all that the Lord commanded Moses, so the children of Israel made all the work.
43 And Moses did look upon all the work, and, behold, they had done it as the Lord had commanded, even so had they done it: and Moses blessed them.
Job 14 in Tamil and English
1 ইয়োব বললেন, “আমরা প্রত্যেকেই মানুষ| আমাদের জীবন ক্ষণস্থায়ী এবং সমস্যায় পূর্ণ|
Man that is born of a woman is of few days, and full of trouble.
2 মানুষের জীবন ফুলের মত| সে তাড়াতাড়ি বড় হয় এবং তারপর মারা যায়| মানুষের জীবন একটা ছায়ার মত যা অল্পক্ষণের জন্য এখানে থাকে এবং তারপর আবার চলে যায়|
He cometh forth like a flower, and is cut down: he fleeth also as a shadow, and continueth not.
3 কিন্তু যদিও আমি নেহাতই একটি মানুষ মাত্র, আপনি আমার ওপর মনোয়োগ দেন এবং আমাকে আদালতে নিয়ে যান|
And dost thou open thine eyes upon such an one, and bringest me into judgment with thee?
4 “কিন্তু অশুচি কিছু থেকে কেই বা শুচি কিছু তৈরী করতে পারে? কেউই নয়!
Who can bring a clean thing out of an unclean? not one.
5 মানুষের জীবন সীমিত| ঈশ্বর, আপনিই স্থির করেছেন মানুষ কতদিন বাঁচবে| আপনিই মানুষের জন্য সেই সীমা নির্ধারণ করেন এবং কোন কিছুই আর তাকে পরিবর্তন করতে পারে না|
Seeing his days are determined, the number of his months are with thee, thou hast appointed his bounds that he cannot pass;
6 তাই ঈশ্বর, আমাদের প্রতি লক্ষ্য রাখা বন্ধ করুন| আমাদের একা ছেড়ে দিন| আমাদের সময় শেষ হওয়া পর্য়ন্ত আমাদের কঠিন জীবন আমাদের উপভোগ করতে দিন|
Turn from him, that he may rest, till he shall accomplish, as an hireling, his day.
7 “এমনকি একটা গাছেরও আশা আছে| যদি না তাকে কেটে ফেলা হয় তা আবার বড় হতে পারে| তা আবার নতুন অঙ্কুর ছড়িয়ে দিতে পারে|
For there is hope of a tree, if it be cut down, that it will sprout again, and that the tender branch thereof will not cease.
8 এর শিকড় মাটির নীচে বুড়ো হয়ে য়েতে পারে, এর কাণ্ড ধূলায মরে য়েতে পারে,
Though the root thereof wax old in the earth, and the stock thereof die in the ground;
9 কিন্তু যদি সামান্য একটুও জল পায় আবার তা বাড়তে শুরু করে| নতুন গাছের মতই তা আবার বড় হতে থাকে|
Yet through the scent of water it will bud, and bring forth boughs like a plant.
10 কিন্তু যখন এক জন শক্তসমর্থ মানুষ মরে, সে শেষ হয়ে যায়| যখন মানুষ মরে যায়, সে চলে যায় ঠিক
But man dieth, and wasteth away: yea, man giveth up the ghost, and where is he?
11 দীঘি য়েমন শুকিয়ে যায় অথবা নদী য়েমন শুকিয়ে যায় তার মতন|
As the waters fail from the sea, and the flood decayeth and drieth up:
12 যখন এক জন মানুষ মরে যায়, সে শুয়ে পড়ে এবং সে আর ওঠে না| এক জন মৃত লোক উঠে দাঁড়াবার আগে এই আকাশমণ্ডল অদৃশ্য হয়ে যাবে| না| সেই নিদ্রা থেকে মানুষ আর জাগবে না|
So man lieth down, and riseth not: till the heavens be no more, they shall not awake, nor be raised out of their sleep.
13 আমার ইচ্ছা আপনি আমাকে আমার কবরে লুকিয়ে রাখুন| আমার ইচ্ছা, আপনার ক্রোধ প্রশমিত না হওয়া পর্য়ন্ত আপনি আমায় সেই খানে লুকিয়ে রাখুন| তারপর না হয় আমাকে স্মরণ করার জন্য আপনি একটা সময় বের করবেন|
O that thou wouldest hide me in the grave, that thou wouldest keep me secret, until thy wrath be past, that thou wouldest appoint me a set time, and remember me!
14 যদি কোন লোক মারা যায়, সে কি আবার বাঁচবে? যদি তাই সম্ভব হয় আমি আমার মুক্তি পর্য়ন্ত অপেক্ষা করবো|
If a man die, shall he live again? all the days of my appointed time will I wait, till my change come.
15 ঈশ্বর, আপনি আমায় ডাকবেন এবং আমি আপনার ডাকে সাড়া দেবো| তাহলে আমি, যাকে আপনি তৈরী করেছেন, সেই আমি আপনার কাছে গুরুত্বপূর্ণ হয়ে উঠব|
Thou shalt call, and I will answer thee: thou wilt have a desire to the work of thine hands.
16 আমার প্রত্যেকটি পদক্ষেপে আপনি আমায় লক্ষ্য করুন, কিন্তু আমার পাপ মনে রাখবেন না|
For now thou numberest my steps: dost thou not watch over my sin?
17 আমার সমস্ত পাপ আপনি একটা থলেতে ভরে, তার মুখ বন্ধ করে, তাকে দূরে ছুঁড়ে ফেলে দেবেন|
My transgression is sealed up in a bag, and thou sewest up mine iniquity.
18 “পর্বতও ভেঙে যায় এবং ধূলায পরিণত হয়; বড় পাথরও আলগা হয়ে ভেঙে পড়ে|
And surely the mountain falling cometh to nought, and the rock is removed out of his place.
19 তাদের ওপর দিয়ে জলরাশি প্রবাহিত হয়ে তাদের ধুয়ে নিয়ে যায়| বন্যা ভূমির মাটিকে ধুয়ে নিয়ে যায়| সেই ভাবেই হে ঈশ্বর, আপনি এক জন মানুষের আশা এবং ইচ্ছা ধ্বংস করেন|
The waters wear the stones: thou washest away the things which grow out of the dust of the earth; and thou destroyest the hope of man.
20 আপনি তাকে সম্পূর্ণ পরাজিত করেন এবং সে চলে যায়| আপনি তাকে দুঃখী করেন এবং চির দিনের জন্য তাকে মৃত্যুলোকে পাঠিয়ে দেন|
Thou prevailest for ever against him, and he passeth: thou changest his countenance, and sendest him away.
21 তার ছেলেরা হয়ত সম্মান পেতে পারে, অথবা তারা হয়ত গুরুত্বপূর্ণ না হতে পারে, কিন্তু সে কখনও জানতে পারবে না|
His sons come to honour, and he knoweth it not; and they are brought low, but he perceiveth it not of them.
22 সেই লোকটি তার শরীরে কেবল যন্ত্রণা ভোগ করে এবং সে উচ্চস্বরে কেবল নিজের জন্যই কাঁদে|”
But his flesh upon him shall have pain, and his soul within him shall mourn.