Exodus 39 - BBE (Kannada)
1 And from the needlework of blue and purple and red they made the robes used for the work of the holy place, and the holy robes for Aaron, as the Lord had given orders to Moses.ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
2 The ephod he made of gold and blue and purple and red and the best linen;ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
3 Hammering the gold into thin plates and cutting it into wires to be worked into the blue and the purple and the red and the linen by the designer.ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
4 And they made two bands for joining its edges together at the top of the arms.(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
5 And the beautifully worked band which went on it was of the same design and the same material, worked in gold and blue and purple and red and twisted linen-work, as the Lord gave orders to Moses.ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
6 Then they made the beryl stones, fixed in twisted frames of gold and cut like the cutting of a stamp, with the names of the children of Israel.ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
7 These he put on the ephod, over the arm-holes, to be stones of memory for the children of Israel, as the Lord had said to Moses.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
8 The priest's bag was designed like the ephod, of the best linen worked with gold and blue and purple and red.ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
9 It was square and folded in two, as long and as wide as the stretch of a man's hand;ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
10 And on it they put four lines of stones: in the first line was a carnelian, a chrysolite, and an emerald;ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
11 In the second, a ruby, a sapphire, and an onyx;ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.
12 In the third, a jacinth, an agate, and an amethyst;ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.
13 In the fourth, a topaz, a beryl, and a jasper; they were fixed in twisted frames of gold.ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
14 There were twelve stones for the twelve tribes of Israel; on every one the name of one of the tribes of Israel was cut, like the cutting of a stamp.ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು.
15 And on the bag they put gold chains, twisted like cords.ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
16 And they made two gold frames and two gold rings, the rings being fixed to the ends of the priest's bag;ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.
17 And they put the two twisted chains on the two rings at the ends of the priest's bag;ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು.
18 And the other two ends of the chains were joined to the two frames and fixed to the front of the ephod over the arm-holes.ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು.
19 And they made two rings of gold and put them on the two lower ends of the bag, on the inner side nearest to the ephod.ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು.
20 And two other gold rings were put on the front of the ephod, over the arm-holes, at the join, and over the worked band.ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.
21 And the rings on the bag were fixed to the rings of the ephod by a blue cord, keeping it in place over the band, so that the bag might not get loose, as the Lord gave orders to Moses.ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
22 The robe which went with the ephod was made all of blue;ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
23 With a hole at the top in the middle, like the hole in the coat of a fighting-man, edged with a band to make it strong.ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು.
24 The skirts of the robe were worked all round with fruits in blue and purple and red made of twisted linen.ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
25 And between the fruits all round the skirt they put gold bells, as the Lord gave orders to Moses.ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು.
26 All round the skirt of the robe were bells and fruits in turn.ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
27 The coats for Aaron and his sons they made of the best linen;ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
28 And the twisted head-dress for Aaron, and beautiful head-dresses of linen, and linen trousers,ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
29 And a linen band worked with a design of blue and purple and red, as the Lord had said to Moses.ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
30 The plate for the holy crown was made of the best gold, and on it were cut these words, HOLY TO THE LORD.ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
31 It was fixed to the head-dress by a blue cord, as the Lord had given orders to Moses.ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
32 So all the work on the House of the Tent of meeting was done; as the Lord had given orders to Moses, so the children of Israel did it.ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.
33 Then they took the House to Moses, the tent with all the things for it; its hooks, its boards, its rods, its pillars, and its bases;ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
34 The outer cover of sheepskins coloured red, and the cover of leather, and the veil for the doorway;ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
35 The ark of the law, with its rods and its cover;ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;
36 The table, with all its vessels and the holy bread;ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;
37 The support for the lights, with the vessels for the lights to be put in their places on it, and all its vessels, and the oil for the lights;ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
38 And the gold altar, and the holy oil, and the sweet perfume for burning, and the curtain for the doorway of the tent;ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
39 And the brass altar, with its network of brass, and its rods and all its vessels, and the washing-vessel and its base;ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,
40 The hangings for the open space, with the pillars and their bases, and the curtain for the doorway, and the cords and nails, and all the instruments necessary for the work of the House of the Tent of meeting;ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
41 The robes for use in the holy place, and the holy robes for Aaron and his sons when acting as priests.ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
42 The children of Israel did everything as the Lord had given orders to Moses.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.
43 Then Moses, when he saw all their work and saw that they had done everything as the Lord had said, gave them his blessing.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
Kannada Bible