Bible

Genesis 18 - WBT (Kannada)

1 And the LORD appeared to him in the plains of Mamre: and he sat in the tent door in the heat of the day;ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.

2 And he lifted up his eyes and looked, and lo, three men stood by him: and when he saw them, he ran to meet them from the tent door, and bowed himself toward the ground,ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--

3 And said, My Lord, if now I have found favor in thy sight, pass not away, I pray thee, from thy servant:ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.

4 Let a little water, I pray you, be brought, and wash your feet, and rest yourselves under the tree:ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.

5 And I will bring a morsel of bread, and comfort ye your hearts; after that you shall pass on: for therefore are ye come to your servant. And they said, So do, as thou hast said.ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.

6 And Abraham hastened into the tent to Sarah, and said, Make ready quickly three measures of fine meal, knead it, and make cakes upon the hearth.ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.

7 And Abraham ran to the herd, and brought a calf tender and good, and gave it to a young man; and he hasted to dress it.ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.

8 And he took butter, and milk, and the calf which he had dressed, and set it before them; and he stood by them under the tree, and they ate.ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.

9 And they said to him, Where is Sarah thy wife? And he said, Behold, in the tent.ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.

10 And he said, I will certainly return to thee according to the time of life; and lo, Sarah thy wife shall have a son. And Sarah heard it in the tent door, which was behind him.ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.

11 Now Abraham and Sarah were old and far advanced in age; and it ceased to be with Sarah after the manner of women.ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.

12 Therefore Sarah laughed within herself, saying, After I am become old shall I have pleasure, my lord being old also?ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.

13 And the LORD said to Abraham, Why did Sarah laugh, saying, Shall I certainly bear a child, who am old?ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?

14 Is any thing too hard for the LORD? At the time appointed I will return to thee, according to the time of life, and Sarah shall have a son.ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.

15 Then Sarah denied, saying, I laughed not; for she was afraid. And he said, Nay; but thou didst laugh.ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.

16 And the men rose up from thence, and looked toward Sodom: and Abraham went with them to bring them on the way.ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.

17 And the LORD said, Shall I hide from Abraham that thing which I do;ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?

18 Seeing that Abraham shall surely become a great and mighty nation, and all the nations of the earth shall be blessed in him?ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.

19 For I know him, that he will command his children and his household after him, and they will keep the way of the LORD, to do justice and judgment; that the LORD may bring upon Abraham that which he hath spoken of him.ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.

20 And the LORD said, Because the cry of Sodom and Gomorrah is great, and because their sin is very grievous;ಕರ್ತನು--ಸೊದೋಮ್‌ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ

21 I will go down now, and see whether they have done altogether according to the cry of it, which is come to me; and if not, I will know.ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.

22 And the men turned their faces from thence, and went towards Sodom: but Abraham stood yet before the LORD.ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.

23 And Abraham drew near, and said, Wilt thou also destroy the righteous with the wicked?ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?

24 Peradventure there are fifty righteous within the city: wilt thou also destroy and not spare the place for the fifty righteous that are in it?ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?

25 That be far from thee to do after this manner, to slay the righteous with the wicked: and that the righteous should be as the wicked, that be far from thee: Shall not the Judge of all the earth do right?ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.

26 And the LORD said, If I find in Sodom fifty righteous within the city, then I will spare all the place for their sakes.ಅದಕ್ಕೆ ಕರ್ತನು--ನನಗೆ ಸೊದೋಮ್‌ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.

27 And Abraham answered and said, Behold now, I, who am dust and ashes, have taken upon me to speak to the Lord.ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.

28 Peradventure there will lack five of the fifty righteous: wilt thou destroy all the city for lack of five? And he said, If I find there forty and five, I will not destroy it.ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.

29 And he spoke to him yet again, and said, Peradventure there will be forty found there. And he said, I will not do it for forty's sake.ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.

30 And he said, Oh, let not the Lord be angry, and I will speak: Peradventure there will thirty be found there. And he said, I will not do it, if I find thirty there.ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.

31 And he said, Behold now, I have taken upon me to speak to the Lord: Peradventure there will be twenty found there. And he said, I will not destroy it for twenty's sake.ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.

32 And he said, Oh let not the Lord be angry, and I will speak yet but this once: Peradventure ten will be found there. And he said, I will not destroy it for ten's sake.ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.

33 And the LORD went his way, as soon as he had left communing with Abraham: and Abraham returned to his place.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.

Kannada Bible