Genesis 21 - WEB (Kannada)
1 Yahweh visited Sarah as he had said, and Yahweh did to Sarah as he had spoken.ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
2 Sarah conceived, and bore Abraham a son in his old age, at the set time of which God had spoken to him.ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
3 Abraham called his son who was born to him, whom Sarah bare to him, Isaac.{Isaac means "He laughs."}ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
4 Abraham circumcised his son, Isaac, when he was eight days old, as God had commanded him.ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
5 Abraham was one hundred years old when his son, Isaac, was born to him.ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
6 Sarah said, "God has made me laugh. Everyone who hears will laugh with me."ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
7 She said, "Who would have said to Abraham, that Sarah would nurse children? For I have borne him a son in his old age."ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
8 The child grew, and was weaned. Abraham made a great feast on the day that Isaac was weaned.ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
9 Sarah saw the son of Hagar the Egyptian, whom she had borne to Abraham, mocking.ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
10 Therefore she said to Abraham, "Cast out this handmaid and her son! For the son of this handmaid will not be heir with my son, even with Isaac."ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
11 The thing was very grievous in Abraham's sight on account of his son.ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
12 God said to Abraham, "Don't let it be grievous in your sight because of the boy, and because of your handmaid. In all that Sarah says to you, listen to her voice. For from Isaac will your seed be called.ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
13 Also of the son of the handmaid will I make a nation, because he is your seed."ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
14 Abraham rose up early in the morning, and took bread and a bottle of water, and gave it to Hagar, putting it on her shoulder, and gave her the child, and sent her away. She departed, and wandered in the wilderness of Beersheba.ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
15 The water in the bottle was spent, and she cast the child under one of the shrubs.ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
16 She went and sat down opposite him, a good way off, about a bow shot away. For she said, "Don't let me see the death of the child." She sat over against him, and lifted up her voice, and wept.ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
17 God heard the voice of the boy. The angel of God called to Hagar out of the sky, and said to her, "What ails you, Hagar? Don't be afraid. For God has heard the voice of the boy where he is.ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
18 Get up, lift up the boy, and hold him in your hand. For I will make him a great nation."ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
19 God opened her eyes, and she saw a well of water. She went, filled the bottle with water, and gave the boy drink.ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
20 God was with the boy, and he grew. He lived in the wilderness, and became, as he grew up, an archer.ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
21 He lived in the wilderness of Paran. His mother took a wife for him out of the land of Egypt.ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
22 It happened at that time, that Abimelech and Phicol the captain of his host spoke to Abraham, saying, "God is with you in all that you do.ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
23 Now therefore swear to me here by God that you will not deal falsely with me, nor with my son, nor with my son's son. But according to the kindness that I have done to you, you shall do to me, and to the land in which you have lived as a foreigner."ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
24 Abraham said, "I will swear."ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
25 Abraham complained to Abimelech because of a water well, which Abimelech's servants had violently taken away.ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
26 Abimelech said, "I don't know who has done this thing. Neither did you tell me, neither did I hear of it, until today."ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
27 Abraham took sheep and oxen, and gave them to Abimelech. Those two made a covenant.ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
28 Abraham set seven ewe lambs of the flock by themselves.ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
29 Abimelech said to Abraham, "What do these seven ewe lambs which you have set by themselves mean?"ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
30 He said, "You shall take these seven ewe lambs from my hand, that it may be a witness to me, that I have dug this well."ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
31 Therefore he called that place Beersheba,{Beersheba can mean "well of the oath" or "well of seven."} because they both swore there.ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
32 So they made a covenant at Beersheba. Abimelech rose up with Phicol, the captain of his host, and they returned into the land of the Philistines.ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
33 Abraham planted a tamarisk tree in Beersheba, and called there on the name of Yahweh, the Everlasting God.ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
34 Abraham lived as a foreigner in the land of the Philistines many days.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
Kannada Bible