Bible

Genesis 6 - DBY (Kannada)

1 And it came to pass when mankind began to multiply on the earth, and daughters were born to them,ತರುವಾಯ ಭೂಮಿಯ ಮೇಲೆ ಜನರು ಹೆಚ್ಚುವದಕ್ಕೆ ಆರಂಭಿಸಿದಾಗ ಅವರಿಗೆ ಕುಮಾರ್ತೆಯರು ಹುಟ್ಟಿದರು.

2 that the sons of God saw the daughters of men that they were fair, and took themselves wives of all that they chose.ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.

3 And Jehovah said, My Spirit shall not always plead with Man; for he indeed is flesh; but his days shall be a hundred and twenty years.ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.

4 In those days were the giants on the earth, and also afterwards, when the sons of God had come in to the daughters of men, and they had borne [children] to them; these were the heroes, who of old were men of renown.ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.

5 And Jehovah saw that the wickedness of Man was great on the earth, and every imagination of the thoughts of his heart only evil continually.ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.

6 And Jehovah repented that he had made Man on the earth, and it grieved him in his heart.ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.

7 And Jehovah said, I will destroy Man, whom I have created, from the earth -- from man to cattle, to creeping things, and to fowl of the heavens; for I repent that I have made them.ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.

8 But Noah found favour in the eyes of Jehovah.ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.

9 This is the history of Noah. Noah was a just man, perfect amongst his generations: Noah walked with God.ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.

10 And Noah begot three sons, Shem, Ham, and Japheth.ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬ ಮೂವರು ಕುಮಾರರು ಹುಟ್ಟಿದರು.

11 And the earth was corrupt before God, and the earth was full of violence.ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.

12 And God looked upon the earth, and behold, it was corrupt; for all flesh had corrupted its way on the earth.ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.

13 And God said to Noah, The end of all flesh is come before me, for the earth is full of violence through them; and behold, I will destroy them with the earth.ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.

14 Make thyself an ark of gopher wood: [with] cells shalt thou make the ark; and pitch it inside and outside with pitch.ನೀನು ಗೋಫೆರ್‌ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.

15 And thus shalt thou make it: let the length of the ark be three hundred cubits, the breadth of it fifty cubits, and the height of it thirty cubits.ನೀನು ಅದನ್ನು ಮಾಡತಕ್ಕ ಮಾದರಿಯು ಇದೇ; ನಾವೆಯ ಉದ್ದವು ಮುನ್ನೂರು ಮೊಳ ಅಗಲ ಐವತ್ತು ಮೊಳ ಎತ್ತರ ಮೂವತ್ತು ಮೊಳ ಇರಬೇಕು.

16 A light shalt thou make to the ark; and to a cubit high shalt thou finish it above. And the door of the ark shalt thou set in its side: [with] a lower, second, and third [story] shalt thou make it.ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು.

17 For I, behold, I bring a flood of waters on the earth, to destroy all flesh under the heavens in which is the breath of life: everything that is on the earth shall expire.ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.

18 But with thee will I establish my covenant; and thou shalt go into the ark, thou, and thy sons, and thy wife, and thy sons' wives with thee.ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.

19 And of every living thing of all flesh, two of every [sort] shalt thou bring into the ark, to keep [them] alive with thee: they shall be male and female.ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.

20 Of fowl after their kind, and of the cattle after their kind, of every creeping thing of the ground after its kind, two of each shall go in to thee, to keep [them] alive.ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.

21 And take thou of all food that is eaten, and gather [it] to thee, that it may be for food for thee and for them.ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.

22 And Noah did it; according to all that God had commanded him, so did he.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

Kannada Bible