Genesis 9:1-17 in Kannada
Genesis 9:1
ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
Genesis 9:2
ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
Genesis 9:3
ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
Genesis 9:4
ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
Genesis 9:5
ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
Genesis 9:6
ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
Genesis 9:7
ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.
Genesis 9:8
ಇದಲ್ಲದೆ ದೇವರು ನೋಹನಿಗೂ ಅವನ ಸಂಗಡವಿರುವ ಅವನ ಕುಮಾರರಿಗೂ ಹೇಳಿದ್ದೇ ನಂದರೆ--
Genesis 9:9
ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ
Genesis 9:10
ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ
Genesis 9:11
ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
Genesis 9:12
ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.
Genesis 9:13
ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
Genesis 9:14
ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.
Genesis 9:15
ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
Genesis 9:16
ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
Genesis 9:17
ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
Kannada Bible