Bible

Genesis 9 - BBE (Kannada)

1 And God gave his blessing to Noah and his sons, and said, Be fertile, and have increase, and make the earth full.ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.

2 And the fear of you will be strong in every beast of the earth and every bird of the air; everything which goes on the land, and all the fishes of the sea, are given into your hands.ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.

3 Every living and moving thing will be food for you; I give them all to you as before I gave you all green things.ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.

4 But flesh with the life-blood in it you may not take for food.ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.

5 And for your blood, which is your life, will I take payment; from every beast I will take it, and from every man will I take payment for the blood of his brother-man.ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.

6 Whoever takes a man's life, by man will his life be taken; because God made man in his image.ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.

7 And now, be fertile and have increase; have offspring on the earth and become great in number.ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.

8 And God said to Noah and to his sons,ಇದಲ್ಲದೆ ದೇವರು ನೋಹನಿಗೂ ಅವನ ಸಂಗಡವಿರುವ ಅವನ ಕುಮಾರರಿಗೂ ಹೇಳಿದ್ದೇ ನಂದರೆ--

9 Truly, I will make my agreement with you and with your seed after you,ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ

10 And with every living thing with you, all birds and cattle and every beast of the earth which comes out of the ark with you.ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ

11 And I will make my agreement with you; never again will all flesh be cut off by the waters; never again will the waters come over all the earth for its destruction.ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.

12 And God said, This is the sign of the agreement which I make between me and you and every living thing with you, for all future generations:ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.

13 I will put my bow in the cloud and it will be for a sign of the agreement between me and the earth.ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.

14 And whenever I make a cloud come over the earth, the bow will be seen in the cloud,ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.

15 And I will keep in mind the agreement between me and you and every living thing; and never again will there be a great flow of waters causing destruction to all flesh.ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.

16 And the bow will be in the cloud, and looking on it, I will keep in mind the eternal agreement between God and every living thing on the earth.ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.

17 And God said to Noah, This is the sign of the agreement which I have made between me and all flesh on the earth.ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.

18 And the sons of Noah who went out of the ark were Shem, Ham, and Japheth; and Ham is the father of Canaan.ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್‌ ಹಾಮ್‌ ಯೆಫೆತ್‌; ಹಾಮನು ಕಾನಾನನ ತಂದೆಯು.

19 These three were the sons of Noah and from them all the earth was peopled.ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.

20 In those days Noah became a farmer, and he made a vine-garden.ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.

21 And he took of the wine of it and was overcome by drink; and he was uncovered in his tent.ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.

22 And Ham, the father of Canaan, saw his father unclothed, and gave news of it to his two brothers outside.ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.

23 And Shem and Japheth took a robe, and putting it on their backs went in with their faces turned away, and put it over their father so that they might not see him unclothed.ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.

24 And, awaking from his wine, Noah saw what his youngest son had done to him, and he said,ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು--

25 Cursed be Canaan; let him be a servant of servants to his brothers.ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--

26 And he said, Praise to the Lord, the God of Shem; let Canaan be his servant.ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.

27 May God make Japheth great, and let his living-place be in the tents of Shem, and let Canaan be his servant.ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.

28 And Noah went on living three hundred and fifty years after the great flow of waters;ಪ್ರಳಯವಾದ ಮೇಲೆ ನೋಹನು ಮೂನ್ನೂರ ಐವತ್ತು ವರುಷ ಬದುಕಿದನು.

29 all the years of his life were nine hundred and fifty: and he came to his end.ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.

Kannada Bible