Genesis 9 - WBT (Kannada)
1 And God blessed Noah and his sons, and said to them, Be fruitful, and multiply, and replenish the earth.ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
2 And the fear of you and the dread of you shall be upon every beast of the earth, and upon every fowl of the air, upon all that moveth on the earth, and upon all the fishes of the sea; into your hand are they delivered.ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
3 Every moving thing that liveth shall be food for you; even as the green herb have I given you all things:ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
4 But flesh with the life of it, which is its blood, shall ye not eat.ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
5 And surely your blood of your lives will I require: at the hand of every beast will I require it: and at the hand of man, at the hand of every man's brother will I require the life of man.ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
6 Whoever sheddeth man's blood, by man shall his blood be shed: for in the image of God made he man.ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
7 And you, be ye fruitful, and multiply, bring forth abundantly in the earth, and multiply therein.ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.
8 And God spoke to Noah, and to his sons with him, saying,ಇದಲ್ಲದೆ ದೇವರು ನೋಹನಿಗೂ ಅವನ ಸಂಗಡವಿರುವ ಅವನ ಕುಮಾರರಿಗೂ ಹೇಳಿದ್ದೇ ನಂದರೆ--
9 And I, behold, I establish my covenant with you, and with your seed after you;ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ
10 And with every living creature that is with you, of the fowl, of the cattle, and of every beast of the earth with you, from all that go out of the ark, to every beast of the earth.ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ
11 And I will establish my covenant with you; neither shall all flesh be cut off any more by the waters of a flood; neither shall there any more be a flood to destroy the earth.ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
12 And God said, This is the token of the covenant which I make between me and you and every living creature that is with you, for perpetual generations.ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.
13 I do set my bow in the cloud, and it shall be for a token of a covenant between me and the earth.ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
14 And it shall come to pass, when I bring a cloud over the earth, that the bow shall be seen in the cloud:ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.
15 And I will remember my covenant, which is between me and you and every living creature of all flesh; and the waters shall no more become a flood to destroy all flesh.ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
16 And the bow shall be in the cloud; and I will look upon it, that I may remember the everlasting covenant between God and every living creature of all flesh that is upon the earth.ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
17 And God said to Noah, This is the token of the covenant which I have established between me and all flesh that is upon the earth.ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
18 And the sons of Noah that went forth from the ark, were Shem, and Ham, and Japheth: and Ham was the father of Canaan.ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್ ಹಾಮ್ ಯೆಫೆತ್; ಹಾಮನು ಕಾನಾನನ ತಂದೆಯು.
19 These three were the sons of Noah: and from them was the whole earth overspread.ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.
20 And Noah began to be a husbandman, and he planted a vineyard:ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.
21 And he drank the wine, and was drunken, and he was uncovered within his tent.ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.
22 And Ham, the father of Canaan, saw the nakedness of his father, and told his two brethren without.ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.
23 And Shem and Japheth took a garment, and laid it upon both their shoulders, and went backward, and covered the nakedness of their father: and their faces were backward, and they saw not their father's nakedness.ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.
24 And Noah awoke from his wine, and knew what his younger son had done to him.ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು--
25 And he said, Cursed be Canaan, a servant of servants shall he be to his brethren.ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
26 And he said, Blessed be the LORD God of Shem; and Canaan shall be his servant.ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
27 God shall enlarge Japheth, and he shall dwell in the tents of Shem; and Canaan shall be his servant.ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
28 And Noah lived after the flood three hundred and fifty years.ಪ್ರಳಯವಾದ ಮೇಲೆ ನೋಹನು ಮೂನ್ನೂರ ಐವತ್ತು ವರುಷ ಬದುಕಿದನು.
29 And all the days of Noah were nine hundred and fifty years: and he died.ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
Kannada Bible