Genesis 40 - WEB (Kannada)
1 It happened after these things, that the butler of the king of Egypt and his baker offended their lord, the king of Egypt.ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.
2 Pharaoh was angry with his two officers, the chief cupbearer and the chief baker.ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
3 He put them in custody in the house of the captain of the guard, into the prison, the place where Joseph was bound.ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
4 The captain of the guard assigned them to Joseph, and he took care of them. They stayed in prison many days.ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
5 They both dreamed a dream, each man his dream, in one night, each man according to the interpretation of his dream, the cupbearer and the baker of the king of Egypt, who were bound in the prison.ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
6 Joseph came in to them in the morning, and saw them, and saw that they were sad.ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
7 He asked Pharaoh's officers who were with him in custody in his master's house, saying, "Why do you look so sad today?"ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
8 They said to him, "We have dreamed a dream, and there is no one who can interpret it." Joseph said to them, "Don't interpretations belong to God? Please tell it to me."ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
9 The chief cupbearer told his dream to Joseph, and said to him, "In my dream, behold, a vine was in front of me,ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
10 and in the vine were three branches. It was as though it budded, its blossoms shot forth, and the clusters of it brought forth ripe grapes.ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
11 Pharaoh's cup was in my hand; and I took the grapes, and pressed them into Pharaoh's cup, and I gave the cup into Pharaoh's hand."ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
12 Joseph said to him, "This is the interpretation of it: the three branches are three days.ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
13 Within three more days, Pharaoh will lift up your head, and restore you to your office. You will give Pharaoh's cup into his hand, the way you did when you were his cupbearer.ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
14 But remember me when it will be well with you, and show kindness, please, to me, and make mention of me to Pharaoh, and bring me out of this house.ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
15 For indeed, I was stolen away out of the land of the Hebrews, and here also have I done nothing that they should put me into the dungeon."ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
16 When the chief baker saw that the interpretation was good, he said to Joseph, "I also was in my dream, and, behold, three baskets of white bread were on my head.ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
17 In the uppermost basket there was all kinds of baked food for Pharaoh, and the birds ate them out of the basket on my head."ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.
18 Joseph answered, "This is the interpretation of it. The three baskets are three days.ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು.
19 Within three more days, Pharaoh will lift up your head from off you, and will hang you on a tree; and the birds will eat your flesh from off you."ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
20 It happened the third day, which was Pharaoh's birthday, that he made a feast for all his servants, and he lifted up the head of the chief cupbearer and the head of the chief baker among his servants.ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
21 He restored the chief cupbearer to his position again, and he gave the cup into Pharaoh's hand;ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
22 but he hanged the chief baker, as Joseph had interpreted to them.ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.
23 Yet the chief cupbearer didn't remember Joseph, but forgot him.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
Kannada Bible