3ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ.Let the day perish wherein I was born, and the night in which it was said, There is a man child conceived.
4ಆ ದಿವಸವು ಕತ್ತಲಾಗಲಿ; ಮೇಲಿನಿಂದ ದೇವರು ಅದನ್ನು ಗೌರವಿಸದಿರಲಿ; ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.Let that day be darkness; let not God regard it from above, neither let the light shine upon it.
5ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.Let darkness and the shadow of death stain it; let a cloud dwell upon it; let the blackness of the day terrify it.
6ಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ.As for that night, let darkness seize upon it; let it not be joined unto the days of the year, let it not come into the number of the months.
7ಇಗೋ, ಆ ರಾತ್ರಿಯು ಒಂಟಿಯಾಗಿರಲಿ; ಆನಂದ ಸ್ವರವು ಅದಕ್ಕೆ ಬಾರದಿರಲಿ.Lo, let that night be solitary, let no joyful voice come therein.
8ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.Let them curse it that curse the day, who are ready to raise up their mourning.
9ಅದರ ಸಂಧ್ಯಾರುಣದ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದು ಕೊಳ್ಳಲೂ ಬಾರದಿರಲಿ; ಅದು ದಿನದ ಉದಯವನ್ನು ನೋಡದಿರಲಿ.Let the stars of the twilight thereof be dark; let it look for light, but have none; neither let it see the dawning of the day:
10ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.Because it shut not up the doors of my mother's womb, nor hid sorrow from mine eyes.
11ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?Why died I not from the womb? why did I not give up the ghost when I came out of the belly?
12ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?Why did the knees prevent me? or why the breasts that I should suck?
13ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.For now should I have lain still and been quiet, I should have slept: then had I been at rest,
14ತಮಗೆ ಹಾಳಾದ ಸ್ಥಳಗಳನ್ನು ಕಟ್ಟುವ ಅರಸುಗಳ ಸಂಗಡಲೂ; ಭೂಮಿಯ ಸಲಹೆಗಾರರ ಸಂಗಡಲೂWith kings and counsellors of the earth, which build desolate places for themselves;
15ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.Or with princes that had gold, who filled their houses with silver:
16ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.Or as an hidden untimely birth I had not been; as infants which never saw light.
17ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.There the wicked cease from troubling; and there the weary be at rest.
18ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.There the prisoners rest together; they hear not the voice of the oppressor.
19ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.The small and great are there; and the servant is free from his master.
20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?Wherefore is light given to him that is in misery, and life unto the bitter in soul;
21ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.Which long for death, but it cometh not; and dig for it more than for hid treasures;
22ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂWhich rejoice exceedingly, and are glad, when they can find the grave?
23ದೇವರು ಸುತ್ತು ಬೇಲಿ ಹಾಕಿದ್ದರಿಂದ ಅಡಗಿದ ಮಾರ್ಗವುಳ್ಳವರಿಗೂ ಬೆಳಕು ಯಾಕೆ?Why is light given to a man whose way is hid, and whom God hath hedged in?
24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.For my sighing cometh before I eat, and my roarings are poured out like the waters.
25ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.For the thing which I greatly feared is come upon me, and that which I was afraid of is come unto me.
26ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.I was not in safety, neither had I rest, neither was I quiet; yet trouble came.