Bible

Psalm 142 - WEB (Kannada)

1 > I cry with my voice to Yahweh. With my voice, I ask Yahweh for mercy.ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.

2 I pour out my complaint before him. I tell him my troubles.ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.

3 When my spirit was overwhelmed within me, You knew my path. In the way in which I walk, They have hidden a snare for me.ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.

4 Look on my right, and see; For there is no one who is concerned for me. Refuge has fled from me. No one cares for my soul.ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.

5 I cried to you, Yahweh. I said, "You are my refuge, My portion in the land of the living."ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.

6 Listen to my cry, For I am in desperate need. Deliver me from my persecutors, For they are stronger than me.ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.

7 Bring my soul out of prison, That I may give thanks to your name. The righteous will surround me, For you will be good to me.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.

Kannada Bible