Bible

Psalm 80 - WEB (Kannada)

1 > Hear us, Shepherd of Israel, You who lead Joseph like a flock, You who sit above the cherubim, shine forth.1 ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.

2 Before Ephraim and Benjamin and Manasseh, stir up your might! Come to save us!ಎಫ್ರಾಯಾಮ್‌ ಬೆನ್ಯಾವಿಾನ್‌ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.

3 Turn us again, God. Cause your face to shine, And we will be saved.ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.

4 Yahweh God of hosts, How long will you be angry against the prayer of your people?ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?

5 You have fed them with the bread of tears, And given them tears to drink in large measure.ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.

6 You make us a source of contention to our neighbors. Our enemies laugh among themselves.ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.

7 Turn us again, God of hosts. Cause your face to shine, And we will be saved.ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.

8 You brought a vine out of Egypt. You drove out the nations, and planted it.ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.

9 You cleared the ground for it. It took deep root, and filled the land.ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು.

10 The mountains were covered with its shadow. Its boughs were like God's cedars.ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು.

11 It sent out its branches to the sea, Its shoots to the River.ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.

12 Why have you broken down its walls, So that all those who pass by the way pluck it?ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?

13 The boar out of the wood ravages it. The wild animals of the field feed on it.ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ.

14 Turn again, we beg you, God of hosts. Look down from heaven, and see, and visit this vine,ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ

15 The stock which your right hand planted, The branch that you made strong for yourself.ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.

16 It's burned with fire. It's cut down. They perish at your rebuke.ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.

17 Let your hand be on the man of your right hand, On the son of man whom you made strong for yourself.ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.

18 So we will not turn away from you. Revive us, and we will call on your name.ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.

19 Turn us again, Yahweh God of hosts. Cause your face to shine, and we will be saved.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.

Kannada Bible