Bible

Hebrews 10 - DBY (Kannada)

1 For the law, having a shadow of the coming good things, not the image itself of the things, can never, by the same sacrifices which they offer continually yearly, perfect those who approach.ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

2 Since, would they not indeed have ceased being offered, on account of the worshippers once purged having no longer any conscience of sins?ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.

3 But in these [there is] a calling to mind of sins yearly.ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.

4 For blood of bulls and goats [is] incapable of taking away sins.ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.

5 Wherefore coming into the world he says, Sacrifice and offering thou willedst not; but thou hast prepared me a body.ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;

6 Thou tookest no pleasure in burnt-offerings and sacrifices for sin.ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;

7 Then I said, Lo, I come (in [the] roll of the book it is written of me) to do, O God, thy will.ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.

8 Above, saying Sacrifices and offerings and burnt-offerings and sacrifices for sin thou willedst not, neither tookest pleasure in (which are offered according to the law);ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.

9 then he said, Lo, I come to do thy will. He takes away the first that he may establish the second;ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.

10 by which will we have been sanctified through the offering of the body of Jesus Christ once for all.ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.

11 And every priest stands daily ministering, and offering often the same sacrifices, which can never take away sins.ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.

12 But *he*, having offered one sacrifice for sins, sat down in perpetuity at [the] right hand of God,ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.

13 waiting from henceforth until his enemies be set [for the] footstool of his feet.ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.

14 For by one offering he has perfected in perpetuity the sanctified.ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.

15 And the Holy Spirit also bears us witness [of it]; for after what was said:ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;

16 This [is] the covenant which I will establish towards them after those days, saith [the] Lord: Giving my laws into their hearts, I will write them also in their understandings;ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.

17 and their sins and their lawlessnesses I will never remember any more.ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.

18 But where there [is] remission of these, [there is] no longer a sacrifice for sin.ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.

19 Having therefore, brethren, boldness for entering into the [holy of] holies by the blood of Jesus,ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

20 the new and living way which he has dedicated for us through the veil, that is, his flesh,ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.

21 and [having] a great priest over the house of God,ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ

22 let us approach with a true heart, in full assurance of faith, sprinkled as to our hearts from a wicked conscience, and washed as to our body with pure water.ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.

23 Let us hold fast the confession of the hope unwavering, (for he [is] faithful who has promised;)ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).

24 and let us consider one another for provoking to love and good works;ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.

25 not forsaking the assembling of ourselves together, as the custom [is] with some; but encouraging [one another], and by so much the more as ye see the day drawing near.ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.

26 For where we sin wilfully after receiving the knowledge of the truth, there no longer remains any sacrifice for sins,ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

27 but a certain fearful expectation of judgment, and heat of fire about to devour the adversaries.ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.

28 Any one that has disregarded Moses' law dies without mercy on [the testimony of] two or three witnesses:ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.

29 of how much worse punishment, think ye, shall he be judged worthy who has trodden under foot the Son of God, and esteemed the blood of the covenant, whereby he has been sanctified, common, and has insulted the Spirit of grace?ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

30 For we know him that said, To me [belongs] vengeance; *I* will recompense, saith the Lord: and again, The Lord shall judge his people.ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.

31 [It is] a fearful thing falling into [the] hands of [the] living God.ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.

32 But call to mind the earlier days in which, having been enlightened, ye endured much conflict of sufferings;ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.

33 on the one hand, when ye were made a spectacle both in reproaches and afflictions; and on the other, when ye became partakers with those who were passing through them.ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.

34 For ye both sympathised with prisoners and accepted with joy the plunder of your goods, knowing that ye have for yourselves a better substance, and an abiding one.ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.

35 Cast not away therefore your confidence, which has great recompense.ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.

36 For ye have need of endurance in order that, having done the will of God, ye may receive the promise.ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

37 For yet a very little while he that comes will come, and will not delay.ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.

38 But the just shall live by faith; and, if he draw back, my soul does not take pleasure in him.ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.

39 But *we* are not drawers back to perdition, but of faith to saving [the] soul.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.

Kannada Bible