Bible

Isaiah 43 - DBY (Kannada)

1 But now thus saith Jehovah, that created thee, O Jacob, and he that formed thee, O Israel: Fear not, for I have redeemed thee, I have called [thee] by thy name; thou art mine.ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.

2 When thou passest through the waters, I [will be] with thee; and through the rivers, they shall not overflow thee; when thou walkest through the fire, thou shalt not be burned, neither shall the flame kindle upon thee.ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.

3 For I [am] Jehovah thy God, the Holy One of Israel, thy Saviour: I gave Egypt for thy ransom, Ethiopia and Seba for thee.ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.

4 Since thou wast precious in my sight, thou hast been honourable, and I have loved thee; and I will give men for thee, and peoples for thy life.ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.

5 Fear not, for I [am] with thee: I will bring thy seed from the east, and gather thee from the west;ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.

6 I will say to the north, Give up; and to the south, Keep not back: bring my sons from afar, and my daughters from the end of the earth,ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು

7 every one that is called by my name, and whom I have created for my glory: I have formed him, yea, I have made him.ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.

8 Bring forth the blind people that have eyes, and the deaf that have ears.ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

9 Let all the nations be gathered together, and let the peoples be assembled: who among them declareth this, or causeth us to hear former things? let them bring forth their witnesses, that they may be justified; or let them hear, and say, [It is] truth.ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.

10 Ye are my witnesses, saith Jehovah, and my servant whom I have chosen; that ye may know and believe me, and understand that I [am] HE: before me there was no ùGod formed, neither shall there be after me.ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.

11 I, I [am] Jehovah; and besides me there is no saviour.ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

12 It is I that have declared, and have saved, and have shewed, when there was no strange [god] among you; and ye are my witnesses, saith Jehovah, that I [am] ùGod.ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.

13 Yea, since the day was, I [am] HE, and there is none that delivereth out of my hand: I will work, and who shall hinder it?ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?

14 Thus saith Jehovah, your Redeemer, the Holy One of Israel: For your sake I have sent to Babylon, and have brought all of them down as fugitives, even the Chaldeans, whose cry is in the ships.ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.

15 I [am] Jehovah, your Holy One, the Creator of Israel, your King.ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.

16 Thus saith Jehovah, who maketh a way in the sea, and a path in the mighty waters,ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.

17 who bringeth forth chariot and horse, army and power -- they lie down together, they shall not rise; they are extinct, they are quenched as tow:ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--

18 -- Remember not the former things, neither consider the ancient things:ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.

19 behold, I do a new thing; now it shall spring forth: shall ye not know it? I will even make a way in the wilderness, rivers in the waste.ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.

20 The beast of the field shall glorify me, the jackals and the ostriches; for I will give waters in the wilderness, rivers in the waste, to give drink to my people, my chosen.ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.

21 This people have I formed for myself: they shall shew forth my praise.ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.

22 -- But thou hast not called upon me, Jacob; for thou hast been weary of me, O Israel:ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!

23 thou hast not brought me the small cattle of thy burnt-offerings, neither hast thou glorified me with thy sacrifices. I have not caused thee to toil with an oblation, nor wearied thee with incense.ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

24 Thou hast bought me no sweet cane with money, neither hast thou filled me with the fat of thy sacrifices; but thou hast made me to toil with thy sins, thou hast wearied me with thine iniquities.ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.

25 -- I, I [am] He that blotteth out thy transgressions for mine own sake, and I will not remember thy sins.ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.

26 Put me in remembrance, let us plead together; rehearse thine own [cause], that thou mayest be justified.ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.

27 Thy first father hath sinned, and thy mediators have rebelled against me.ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.

28 And I have profaned the princes of the sanctuary, and have given Jacob to the ban, and Israel to reproaches.ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.

Kannada Bible