James 2 - DBY (Kannada)
1 My brethren, do not have the faith of our Lord Jesus Christ, [Lord] of glory, with respect of persons:ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
2 for if there come unto your synagogue a man with a gold ring in splendid apparel, and a poor man also come in in vile apparel,ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು
3 and ye look upon him who wears the splendid apparel, and say, Do thou sit here well, and say to the poor, Do thou stand there, or sit here under my footstool:ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
4 have ye not made a difference among yourselves, and become judges having evil thoughts?ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
5 Hear, my beloved brethren: Has not God chosen the poor as to the world, rich in faith, and heirs of the kingdom, which he has promised to them that love him?ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
6 But *ye* have despised the poor [man]. Do not the rich oppress you, and [do not] *they* drag you before [the] tribunals?ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
7 And [do not] *they* blaspheme the excellent name which has been called upon you?ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
8 If indeed ye keep [the] royal law according to the scripture, Thou shalt love thy neighbour as thyself, ye do well.ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
9 But if ye have respect of persons, ye commit sin, being convicted by the law as transgressors.ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
10 For whoever shall keep the whole law and shall offend in one [point], he has come under the guilt of [breaking] all.ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
11 For he who said, Thou shalt not commit adultery, said also, Thou shalt not kill. Now if thou dost not commit adultery, but killest, thou art become transgressor of [the] law.ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
12 So speak ye, and so act, as those that are to be judged by [the] law of liberty;ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
13 for judgment [will be] without mercy to him that has shewn no mercy. Mercy glories over judgment.ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
14 What [is] the profit, my brethren, if any one say he have faith, but have not works? can faith save him?ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
15 Now if a brother or a sister is naked and destitute of daily food,ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
16 and one from amongst you say to them, Go in peace, be warmed and filled; but give not to them the needful things for the body, what [is] the profit?ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
17 So also faith, if it have not works, is dead by itself.ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
18 But some one will say, *Thou* hast faith and *I* have works. Shew me thy faith without works, and *I* from my works will shew thee my faith.ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
19 *Thou* believest that God is one. Thou doest well. The demons even believe, and tremble.ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
20 But wilt thou know, O vain man, that faith without works is dead?ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
21 Was not Abraham our father justified by works when he had offered Isaac his son upon the altar?ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
22 Thou seest that faith wrought with his works, and that by works faith was perfected.ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
23 And the scripture was fulfilled which says, Abraham believed God, and it was reckoned to him as righteousness, and he was called Friend of God.ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
24 Ye see that a man is justified on the principle of works, and not on the principle of faith only.ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
25 But was not in like manner also Rahab the harlot justified on the principle of works, when she had received the messengers and put [them] forth by another way?ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?
26 For as the body without a spirit is dead, so also faith without works is dead.ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
Kannada Bible