Jeremiah 39 - WEB (Kannada)
1 It happened when Jerusalem was taken, (in the ninth year of Zedekiah king of Judah, in the tenth month, came Nebuchadrezzar king of Babylon and all his army against Jerusalem, and besieged it;ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
2 in the eleventh year of Zedekiah, in the fourth month, the ninth day of the month, a breach was made in the city),ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
3 that all the princes of the king of Babylon came in, and sat in the middle gate, [to wit], Nergal Sharezer, Samgar-nebo, Sarsechim, Rabsaris, Nergal Sharezer, Rabmag, with all the rest of the princes of the king of Babylon.ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್‌ಸ ರೇಚರನೂ ಸಮ್ಗರ್‌ನೆಬೋವನೂ ಸರ್ಸೆಕೀಮನೂ ನೇರ್ಗೆಲ್‌ಸರೆಚರನೂ ರಬ್‌ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
4 It happened that, when Zedekiah the king of Judah and all the men of war saw them, then they fled, and went forth out of the city by night, by the way of the king's garden, through the gate between the two walls; and he went out toward the Arabah.ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
5 But the army of the Chaldeans pursued after them, and overtook Zedekiah in the plains of Jericho: and when they had taken him, they brought him up to Nebuchadrezzar king of Babylon to Riblah in the land of Hamath; and he gave judgment on him.ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
6 Then the king of Babylon killed the sons of Zedekiah in Riblah before his eyes: also the king of Babylon killed all the nobles of Judah.ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
7 Moreover he put out Zedekiah's eyes, and bound him in fetters, to carry him to Babylon.ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
8 The Chaldeans burned the king's house, and the houses of the people, with fire, and broke down the walls of Jerusalem.ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
9 Then Nebuzaradan the captain of the guard carried away captive into Babylon the residue of the people who remained in the city, the deserters also who fell away to him, and the residue of the people who remained.ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
10 But Nebuzaradan the captain of the guard left of the poor of the people, who had nothing, in the land of Judah, and gave them vineyards and fields at the same time.ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
11 Now Nebuchadrezzar king of Babylon gave charge concerning Jeremiah to Nebuzaradan the captain of the guard, saying,ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ--
12 Take him, and look well to him, and do him no harm; but do to him even as he shall tell you.ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು.
13 So Nebuzaradan the captain of the guard sent, and Nebushazban, Rabsaris, and Nergal Sharezer, Rabmag, and all the chief officers of the king of Babylon;ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್‌ಶೇರಿಸ್‌ನನ್ನೂ ನೇರ್ಗಲ್‌ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
14 they sent, and took Jeremiah out of the court of the guard, and committed him to Gedaliah the son of Ahikam, the son of Shaphan, that he should carry him home: so he lived among the people.ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
15 Now the word of Yahweh came to Jeremiah, while he was shut up in the court of the guard, saying,ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ--
16 Go, and speak to Ebedmelech the Ethiopian, saying, Thus says Yahweh of Hosts, the God of Israel: Behold, I will bring my words on this city for evil, and not for good; and they shall be accomplished before you in that day.ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
17 But I will deliver you in that day, says Yahweh; and you shall not be given into the hand of the men of whom you are afraid.ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.
18 For I will surely save you, and you shall not fall by the sword, but your life shall be for a prey to you; because you have put your trust in me, says Yahweh.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ
Kannada Bible