Job 24
1 ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?
2 ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
3 ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
4 ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ.
5 ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ.
6 ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ.
7 ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ.
8 ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ.
9 ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
10 ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
11 ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.
12 ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.
13 ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು.
14 ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ.
15 ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ.
16 ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.
17 ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
18 ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.
19 ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.
20 ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
21 ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
22 ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ.
23 ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.
24 ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.
25 ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
1 Why, seeing times are not hidden from the Almighty, do they that know him not see his days?
2 Some remove the landmarks; they violently take away flocks, and feed thereof.
3 They drive away the ass of the fatherless, they take the widow’s ox for a pledge.
4 They turn the needy out of the way: the poor of the earth hide themselves together.
5 Behold, as wild asses in the desert, go they forth to their work; rising betimes for a prey: the wilderness yieldeth food for them and for their children.
6 They reap every one his corn in the field: and they gather the vintage of the wicked.
7 They cause the naked to lodge without clothing, that they have no covering in the cold.
8 They are wet with the showers of the mountains, and embrace the rock for want of a shelter.
9 They pluck the fatherless from the breast, and take a pledge of the poor.
10 They cause him to go naked without clothing, and they take away the sheaf from the hungry;
11 Which make oil within their walls, and tread their winepresses, and suffer thirst.
12 Men groan from out of the city, and the soul of the wounded crieth out: yet God layeth not folly to them.
13 They are of those that rebel against the light; they know not the ways thereof, nor abide in the paths thereof.
14 The murderer rising with the light killeth the poor and needy, and in the night is as a thief.
15 The eye also of the adulterer waiteth for the twilight, saying, No eye shall see me: and disguiseth his face.
16 In the dark they dig through houses, which they had marked for themselves in the daytime: they know not the light.
17 For the morning is to them even as the shadow of death: if one know them, they are in the terrors of the shadow of death.
18 He is swift as the waters; their portion is cursed in the earth: he beholdeth not the way of the vineyards.
19 Drought and heat consume the snow waters: so doth the grave those which have sinned.
20 The womb shall forget him; the worm shall feed sweetly on him; he shall be no more remembered; and wickedness shall be broken as a tree.
21 He evil entreateth the barren that beareth not: and doeth not good to the widow.
22 He draweth also the mighty with his power: he riseth up, and no man is sure of life.
23 Though it be given him to be in safety, whereon he resteth; yet his eyes are upon their ways.
24 They are exalted for a little while, but are gone and brought low; they are taken out of the way as all other, and cut off as the tops of the ears of corn.
25 And if it be not so now, who will make me a liar, and make my speech nothing worth?
Job 20 in Tamil and English
1 ನಾಮಾಥ್ಯನಾದ ಚೋಫರನು ಉತ್ತರ ಕೊಟ್ಟು ಹೇಳಿದ್ದೇನಂದರೆ--
Then answered Zophar the Naamathite, and said,
2 ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ.
Therefore do my thoughts cause me to answer, and for this I make haste.
3 ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
I have heard the check of my reproach, and the spirit of my understanding causeth me to answer.
4 ಇದನ್ನು ಆದಿಯಿಂದಲೂ ಅಂದರೆ ಮನುಷ್ಯನನ್ನು ಭೂಮಿಯ ಮೇಲೆ ಇಟ್ಟಂದಿನಿಂದಲೂ ನೀನು ತಿಳಿಯಲಿಲ್ಲವೋ?
Knowest thou not this of old, since man was placed upon earth,
5 ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
That the triumphing of the wicked is short, and the joy of the hypocrite but for a moment?
6 ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ
Though his excellency mount up to the heavens, and his head reach unto the clouds;
7 ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
Yet he shall perish for ever like his own dung: they which have seen him shall say, Where is he?
8 ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
He shall fly away as a dream, and shall not be found: yea, he shall be chased away as a vision of the night.
9 ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
The eye also which saw him shall see him no more; neither shall his place any more behold him.
10 ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
His children shall seek to please the poor, and his hands shall restore their goods.
11 ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
His bones are full of the sin of his youth, which shall lie down with him in the dust.
12 ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
Though wickedness be sweet in his mouth, though he hide it under his tongue;
13 ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ
Though he spare it, and forsake it not; but keep it still within his mouth:
14 ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು.
Yet his meat in his bowels is turned, it is the gall of asps within him.
15 ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
He hath swallowed down riches, and he shall vomit them up again: God shall cast them out of his belly.
16 ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.
He shall suck the poison of asps: the viper’s tongue shall slay him.
17 ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.
He shall not see the rivers, the floods, the brooks of honey and butter.
18 ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
That which he laboured for shall he restore, and shall not swallow it down: according to his substance shall the restitution be, and he shall not rejoice therein.
19 ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
Because he hath oppressed and hath forsaken the poor; because he hath violently taken away an house which he builded not;
20 ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.
Surely he shall not feel quietness in his belly, he shall not save of that which he desired.
21 ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.
There shall none of his meat be left; therefore shall no man look for his goods.
22 ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
In the fulness of his sufficiency he shall be in straits: every hand of the wicked shall come upon him.
23 ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
When he is about to fill his belly, God shall cast the fury of his wrath upon him, and shall rain it upon him while he is eating.
24 ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು.
He shall flee from the iron weapon, and the bow of steel shall strike him through.
25 ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
It is drawn, and cometh out of the body; yea, the glittering sword cometh out of his gall: terrors are upon him.
26 ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
All darkness shall be hid in his secret places: a fire not blown shall consume him; it shall go ill with him that is left in his tabernacle.
27 ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು.
The heaven shall reveal his iniquity; and the earth shall rise up against him.
28 ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.
The increase of his house shall depart, and his goods shall flow away in the day of his wrath.
29 ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
This is the portion of a wicked man from God, and the heritage appointed unto him by God.