Bible

John 10:7-21 in Kannada

John 10:7
ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.

John 10:8
ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.

John 10:9
ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.

John 10:10
ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.

John 10:11
ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

John 10:12
ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.

John 10:13
ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.

John 10:14
ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.

John 10:15
ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.

John 10:16
ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.

John 10:17
ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ.

John 10:18
ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.

John 10:19
ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.

John 10:20
ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.

John 10:21
ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.

Kannada Bible