John 12:8
ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
For | τοὺς | tous | toos |
the | πτωχοὺς | ptōchous | ptoh-HOOS |
poor | γὰρ | gar | gahr |
always | πάντοτε | pantote | PAHN-toh-tay |
ye have | ἔχετε | echete | A-hay-tay |
with | μεθ' | meth | mayth |
you; | ἑαυτῶν | heautōn | ay-af-TONE |
but | ἐμὲ | eme | ay-MAY |
me | δὲ | de | thay |
ye have | οὐ | ou | oo |
not | πάντοτε | pantote | PAHN-toh-tay |
always. | ἔχετε | echete | A-hay-tay |
Cross Reference
Deuteronomy 15:11
ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
Mark 14:7
ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
Matthew 26:11
ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
Song of Solomon 5:6
ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು.
John 8:21
ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
John 12:35
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
John 13:33
ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
John 16:5
ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
Acts 1:9
ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.