Skip to content
CHRIST SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
John 20 KJV ASV BBE DBY WBT WEB YLT

John 20 in Kannada WBT Compare Webster's Bible

John 20

1 ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.

2 ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.

3 ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು.

4 ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.

5 ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ.

6 ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ

7 ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು.

8 ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.

9 ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.

10 ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.

11 ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ

12 ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.

13 ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.

14 ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.

15 ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ

16 ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.

17 ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು

18 ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.

19 ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.

20 ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.

21 ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.

22 ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;

23 ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.

24 ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.

25 ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ

26 ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.

27 ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.

28 ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.

29 ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.

30 ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.

31 ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close