Bible

John 5 - ASV (Kannada)

1 After these things there was a feast of the Jews; and Jesus went up to Jerusalem.ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.

2 Now there is in Jerusalem by the sheep `gate' a pool, which is called in Hebrew Bethesda, having five porches.ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.

3 In these lay a multitude of them that were sick, blind, halt, withered, `waiting for the moving of the water.'ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.

4 `for an angel of the Lord went down at certain seasons into the pool, and troubled the water: whosoever then first after the troubling of the waters stepped in was made whole, with whatsoever disease he was holden.'ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.

5 And a certain man was there, who had been thirty and eight years in his infirmity.ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.

6 When Jesus saw him lying, and knew that he had been now a long time `in that case', he saith unto him, Wouldest thou be made whole?ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.

7 The sick man answered him, Sir, I have no man, when the water is troubled, to put me into the pool: but while I am coming, another steppeth down before me.ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.

8 Jesus saith unto him, Arise, take up thy bed, and walk.ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.

9 And straightway the man was made whole, and took up his bed and walked. Now it was the sabbath on that day.ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.

10 So the Jews said unto him that was cured, It is the sabbath, and it is not lawful for thee to take up thy bed.ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್‌ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.

11 But he answered them, He that made me whole, the same said unto me, Take up thy bed, and walk.ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.

12 They asked him, Who is the man that said unto thee, Take up `thy bed', and walk?ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.

13 But he that was healed knew not who it was; for Jesus had conveyed himself away, a multitude being in the place.ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.

14 Afterward Jesus findeth him in the temple, and said unto him, Behold, thou art made whole: sin no more, lest a worse thing befall thee.ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.

15 The man went away, and told the Jews that it was Jesus who had made him whole.ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.

16 And for this cause the Jews persecuted Jesus, because he did these things on the sabbath.ಆತನು ಇವುಗಳನ್ನು ಸಬ್ಬತ್‌ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.

17 But Jesus answered them, My Father worketh even until now, and I work.ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.

18 For this cause therefore the Jews sought the more to kill him, because he not only brake the sabbath, but also called God his own Father, making himself equal with God.ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.

19 Jesus therefore answered and said unto them, Verily, verily, I say unto you, The Son can do nothing of himself, but what he seeth the Father doing: for what things soever he doeth, these the Son also doeth in like manner.ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.

20 For the Father loveth the Son, and showeth him all things that himself doeth: and greater works than these will he show him, that ye may marvel.ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.

21 For as the Father raiseth the dead and giveth them life, even so the Son also giveth life to whom he will.ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.

22 For neither doth the Father judge any man, but he hath given all judgment unto the Son;ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;

23 that all may honor the Son, even as they honor the Father. He that honoreth not the Son honoreth not the Father that sent him.ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.

24 Verily, verily, I say unto you, He that heareth my word, and believeth him that sent me, hath eternal life, and cometh not into judgment, but hath passed out of death into life.ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

25 Verily, verily, I say unto you, The hour cometh, and now is, when the dead shall hear the voice of the Son of God; and they that hear shall live.ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.

26 For as the Father hath life in himself, even so gave he to the Son also to have life in himself:ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.

27 and he gave him authority to execute judgment, because he is a son of man.ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.

28 Marvel not at this: for the hour cometh, in which all that are in the tombs shall hear his voice,ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,

29 and shall come forth; they that have done good, unto the resurrection of life; and they that have done evil, unto the resurrection of judgment.ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.

30 I can of myself do nothing: as I hear, I judge: and my judgment is righteous; because I seek not mine own will, but the will of him that sent me.ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.

31 If I bear witness of myself, my witness is not true.ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.

32 It is another that beareth witness of me; and I know that the witness which he witnesseth of me is true.ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.

33 Ye have sent unto John, and he hath borne witness unto the truth.ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.

34 But the witness which I receive is not from man: howbeit I say these things, that ye may be saved.ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.

35 He was the lamp that burneth and shineth; and ye were willing to rejoice for a season in his light.ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;

36 But the witness which I have is greater than `that of' John; for the works which the Father hath given me to accomplish, the very works that I do, bear witness of me, that the Father hath sent me.ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

37 And the Father that sent me, he hath borne witness of me. Ye have neither heard his voice at any time, nor seen his form.ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.

38 And ye have not his word abiding in you: for whom he sent, him ye believe not.ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.

39 Ye search the scriptures, because ye think that in them ye have eternal life; and these are they which bear witness of me;ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.

40 and ye will not come to me, that ye may have life.ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.

41 I receive not glory from men.ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.

42 But I know you, that ye have not the love of God in yourselves.ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.

43 I am come in my Father's name, and ye receive me not: if another shall come in his own name, him ye will receive.ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.

44 How can ye believe, who receive glory one of another, and the glory that `cometh' from the only God ye seek not?ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?

45 Think not that I will accuse you to the Father: there is one that accuseth you, `even' Moses, on whom ye have set your hope.ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.

46 For if ye believed Moses, ye would believe me; for he wrote of me.ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.

47 But if ye believe not his writings, how shall ye believe my words?ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.

Kannada Bible