Bible

John 5 - DBY (Kannada)

1 After these things was a feast of the Jews, and Jesus went up to Jerusalem.ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.

2 Now there is in Jerusalem, at the sheepgate, a pool, which is called in Hebrew, Bethesda, having five porches.ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.

3 In these lay a multitude of sick, blind, lame, withered, [awaiting the moving of the water.ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.

4 For an angel descended at a certain season in the pool and troubled the water. Whoever therefore first went in after the troubling of the water became well, whatever disease he laboured under.]ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.

5 But there was a certain man there who had been suffering under his infirmity thirty and eight years.ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.

6 Jesus seeing this [man] lying [there], and knowing that he was [in that state] now a great length of time, says to him, Wouldest thou become well?ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.

7 The infirm [man] answered him, Sir, I have not a man, in order, when the water has been troubled, to cast me into the pool; but while I am coming another descends before me.ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.

8 Jesus says to him, Arise, take up thy couch and walk.ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.

9 And immediately the man became well, and took up his couch and walked: and on that day was sabbath.ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.

10 The Jews therefore said to the healed [man], It is sabbath, it is not permitted thee to take up thy couch.ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್‌ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.

11 He answered them, He that made me well, *he* said to me, Take up thy couch and walk.ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.

12 They asked him [therefore], Who is the man who said to thee, Take up thy couch and walk?ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.

13 But he that had been healed knew not who it was, for Jesus had slidden away, there being a crowd in the place.ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.

14 After these things Jesus finds him in the temple, and said to him, Behold, thou art become well: sin no more, that something worse do not happen to thee.ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.

15 The man went away and told the Jews that it was Jesus who had made him well.ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.

16 And for this the Jews persecuted Jesus [and sought to kill him], because he had done these things on sabbath.ಆತನು ಇವುಗಳನ್ನು ಸಬ್ಬತ್‌ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.

17 But Jesus answered them, My Father worketh hitherto and I work.ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.

18 For this therefore the Jews sought the more to kill him, because he had not only violated the sabbath, but also said that God was his own Father, making himself equal with God.ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.

19 Jesus therefore answered and said to them, Verily, verily, I say to you, The Son can do nothing of himself save whatever he sees the Father doing: for whatever things *he* does, these things also the Son does in like manner.ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.

20 For the Father loves the Son and shews him all things which he himself does; and he will shew him greater works than these, that ye may wonder.ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.

21 For even as the Father raises the dead and quickens [them], thus the Son also quickens whom he will:ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.

22 for neither does the Father judge any one, but has given all judgment to the Son;ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;

23 that all may honour the Son, even as they honour the Father. He who honours not the Son, honours not the Father who has sent him.ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.

24 Verily, verily, I say unto you, that he that hears my word, and believes him that has sent me, has life eternal, and does not come into judgment, but is passed out of death into life.ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

25 Verily, verily, I say unto you, that an hour is coming, and now is, when the dead shall hear the voice of the Son of God, and they that have heard shall live.ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.

26 For even as the Father has life in himself, so he has given to the Son also to have life in himself,ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.

27 and has given him authority to execute judgment [also], because he is Son of man.ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.

28 Wonder not at this, for an hour is coming in which all who are in the tombs shall hear his voice,ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,

29 and shall go forth; those that have practised good, to resurrection of life, and those that have done evil, to resurrection of judgment.ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.

30 I cannot do anything of myself; as I hear, I judge, and my judgment is righteous, because I do not seek my will, but the will of him that has sent me.ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.

31 If I bear witness concerning myself, my witness is not true.ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.

32 It is another who bears witness concerning me, and I know that the witness which he bears concerning me is true.ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.

33 Ye have sent unto John, and he has borne witness to the truth.ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.

34 But I do not receive witness from man, but I say this that *ye* might be saved.ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.

35 *He* was the burning and shining lamp, and ye were willing for a season to rejoice in his light.ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;

36 But I have the witness [that is] greater than [that] of John; for the works which the Father has given me that I should complete them, the works themselves which I do, bear witness concerning me that the Father has sent me.ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

37 And the Father who has sent me himself has borne witness concerning me. Ye have neither heard his voice at any time, nor have seen his shape,ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.

38 and ye have not his word abiding in you; for whom *he* hath sent, him ye do not believe.ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.

39 Ye search the scriptures, for ye think that in them ye have life eternal, and they it is which bear witness concerning me;ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.

40 and ye will not come to me that ye might have life.ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.

41 I do not receive glory from men,ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.

42 but I know you, that ye have not the love of God in you.ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.

43 I am come in my Father's name, and ye receive me not; if another come in his own name, him ye will receive.ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.

44 How can ye believe, who receive glory one of another, and seek not the glory which [comes] from God alone?ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?

45 Think not that I will accuse you to the Father: there is [one] who accuses you, Moses, on whom ye trust;ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.

46 for if ye had believed Moses, ye would have believed me, for he wrote of me.ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.

47 But if ye do not believe his writings, how shall ye believe my words?ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.

Kannada Bible