Bible

John 7 - WEB (Kannada)

1 After these things, Jesus was walking in Galilee, for he wouldn't walk in Judea, because the Jews sought to kill him.ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.

2 Now the feast of the Jews, the Feast of Booths, was at hand.ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.

3 His brothers therefore said to him, "Depart from here, and go into Judea, that your disciples also may see your works which you do.ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;

4 For no one does anything in secret, and himself seeks to be known openly. If you do these things, reveal yourself to the world."ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.

5 For even his brothers didn't believe in him.ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.

6 Jesus therefore said to them, "My time has not yet come, but your time is always ready.ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.

7 The world can't hate you, but it hates me, because I testify about it, that its works are evil.ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.

8 You go up to the feast. I am not yet going up to this feast, because my time is not yet fulfilled."ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.

9 Having said these things to them, he stayed in Galilee.ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.

10 But when his brothers had gone up to the feast, then he also went up, not publicly, but as it were in secret.ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.

11 The Jews therefore sought him at the feast, and said, "Where is he?"ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.

12 There was much murmuring among the multitudes concerning him. Some said, "He is a good man." Others said, "Not so, but he leads the multitude astray."ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.

13 Yet no one spoke openly of him for fear of the Jews.ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.

14 But when it was now the midst of the feast, Jesus went up into the temple and taught.ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.

15 The Jews therefore marveled, saying, "How does this man know letters, having never been educated?"ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.

16 Jesus therefore answered them, "My teaching is not mine, but his who sent me.ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.

17 If anyone desires to do his will, he will know about the teaching, whether it is from God, or if I am speaking from myself.ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

18 He who speaks from himself seeks his own glory, but he who seeks the glory of him who sent him, the same is true, and no unrighteousness is in him.ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.

19 Didn't Moses give you the law, and yet none of you keeps the law? Why do you seek to kill me?"ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.

20 The multitude answered, "You have a demon! Who seeks to kill you?"ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.

21 Jesus answered them, "I did one work, and you all marvel because of it.ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ

22 Moses has given you circumcision (not that it is of Moses, but of the fathers), and on the Sabbath you circumcise a boy.ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್‌ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.

23 If a boy receives circumcision on the Sabbath, that the law of Moses may not be broken, are you angry with me, because I made a man every bit whole on the Sabbath?ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್‌ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?

24 Don't judge according to appearance, but judge righteous judgment."ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.

25 Therefore some of them of Jerusalem said, "Isn't this he whom they seek to kill?ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?

26 Behold, he speaks openly, and they say nothing to him. Can it be that the rulers indeed know that this is truly the Christ?ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?

27 However we know where this man comes from, but when the Christ comes, no one will know where he comes from."ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.

28 Jesus therefore cried out in the temple, teaching and saying, "You both know me, and know where I am from. I have not come of myself, but he who sent me is true, whom you don't know.ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.

29 I know him, because I am from him, and he sent me."ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.

30 They sought therefore to take him; but no one laid a hand on him, because his hour had not yet come.ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.

31 But of the multitude, many believed in him. They said, "When the Christ comes, he won't do more signs than those which this man has done, will he?"ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.

32 The Pharisees heard the multitude murmuring these things concerning him, and the chief priests and the Pharisees sent officers to arrest him.ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.

33 Then Jesus said, "I will be with you a little while longer, then I go to him who sent me.ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.

34 You will seek me, and won't find me; and where I am, you can't come."ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.

35 The Jews therefore said among themselves, "Where will this man go that we won't find him? Will he go to the Dispersion among the Greeks, and teach the Greeks?ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?

36 What is this word that he said, 'You will seek me, and won't find me; and where I am, you can't come?'"ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.

37 Now on the last and greatest day of the feast, Jesus stood and cried out, "If anyone is thirsty, let him come to me and drink!ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

38 He who believes in me, as the Scripture has said, from within him will flow rivers of living water."ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.

39 But he said this about the Spirit, which those believing in him were to receive. For the Holy Spirit was not yet given, because Jesus wasn't yet glorified.(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)

40 Many of the multitude therefore, when they heard these words, said, "This is truly the prophet."ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.

41 Others said, "This is the Christ." But some said, "What, does the Christ come out of Galilee?ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?

42 Hasn't the Scripture said that the Christ comes of the seed of David, and from Bethlehem, the village where David was?"ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.

43 So there arose a division in the multitude because of him.ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;

44 Some of them would have arrested him, but no one laid hands on him.ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.

45 The officers therefore came to the chief priests and Pharisees, and they said to them, "Why didn't you bring him?"ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.

46 The officers answered, "No man ever spoke like this man!"ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.

47 The Pharisees therefore answered them, "You aren't also led astray, are you?ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?

48 Have any of the rulers believed in him, or of the Pharisees?ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?

49 But this multitude that doesn't know the law is accursed."ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.

50 Nicodemus (he who came to him by night, being one of them) said to them,ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)

51 "Does our law judge a man, unless it first hears from him personally and knows what he does?"ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.

52 They answered him, "Are you also from Galilee? Search, and see that no prophet has arisen out of Galilee."ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.

53 Everyone went to his own house,ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.

Kannada Bible