John 9 - ASV (Kannada)
1 And as he passed by, he saw a man blind from his birth.ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
2 And his disciples asked him, saying, Rabbi, who sinned, this man, or his parents, that he should be born blind?ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
3 Jesus answered, Neither did this man sin, nor his parents: but that the works of God should be made manifest in him.ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
4 We must work the works of him that sent me, while it is day: the night cometh, when no man can work.ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
5 When I am in the world, I am the light of the world.ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
6 When he had thus spoken, he spat on the ground, and made clay of the spittle, and anointed his eyes with the clay,ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
7 and said unto him, Go, wash in the pool of Siloam (which is by interpretation, Sent). He went away therefore, and washed, and came seeing.ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
8 The neighbors therefore, and they that saw him aforetime, that he was a beggar, said, Is not this he that sat and begged?ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
9 Others said, It is he: others said, No, but he is like him. He said, I am `he'.ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.
10 They said therefore unto him, How then were thine eyes opened?ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
11 He answered, The man that is called Jesus made clay, and anointed mine eyes, and said unto me, Go to Siloam, and wash: so I went away and washed, and I received sight.ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
12 And they said unto him, Where is he? He saith, I know not.ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
13 They bring to the Pharisees him that aforetime was blind.ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
14 Now it was the sabbath on the day when Jesus made the clay, and opened his eyes.ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್‌ದಿನವಾಗಿತ್ತು.
15 Again therefore the Pharisees also asked him how he received his sight. And he said unto them, He put clay upon mine eyes, and I washed, and I see.ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
16 Some therefore of the Pharisees said, This man is not from God, because he keepeth not the sabbath. But others said, How can a man that is a sinner do such signs? And there was division among them.ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
17 They say therefore unto the blind man again, What sayest thou of him, in that he opened thine eyes? And he said, He is a prophet.ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
18 The Jews therefore did not believe concerning him, that he had been blind, and had received his sight, until they called the parents of him that had received his sight,ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
19 and asked them, saying, Is this your son, who ye say was born blind? How then doth he now see?ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
20 His parents answered and said, We know that this is our son, and that he was born blind:ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
21 but how he now seeth, we know not; or who opened his eyes, we know not: ask him; he is of age; he shall speak for himself.ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
22 These things said his parents, because they feared the Jews: for the Jews had agreed already, that if any man should confess him `to be' Christ, he should be put out of the synagogue.ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
23 Therefore said his parents, He is of age; ask him.ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
24 So they called a second time the man that was blind, and said unto him, Give glory to God: we know that this man is a sinner.ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
25 He therefore answered, Whether he is a sinner, I know not: one thing I know, that, whereas I was blind, now I see.ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
26 They said therefore unto him, What did he to thee? How opened he thine eyes?ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
27 He answered them, I told you even now, and ye did not hear; wherefore would ye hear it again? would ye also become his disciples?ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
28 And they reviled him, and said, Thou art his disciple; but we are disciples of Moses.ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
29 We know that God hath spoken unto Moses: but as for this man, we know not whence he is.ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
30 The man answered and said unto them, Why, herein is the marvel, that ye know not whence he is, and `yet' he opened mine eyes.ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
31 We know that God heareth not sinners: but if any man be a worshipper of God, and do his will, him he heareth.ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
32 Since the world began it was never heard that any one opened the eyes of a man born blind.ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
33 If this man were not from God, he could do nothing.ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
34 They answered and said unto him, Thou wast altogether born in sins, and dost thou teach us? And they cast him out.ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35 Jesus heard that they had cast him out; and finding him, he said, Dost thou believe on the Son of God?ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
36 He answered and said, And who is he, Lord, that I may believe on him?ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
37 Jesus said unto him, Thou hast both seen him, and he it is that speaketh with thee.ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
38 And he said, Lord, I believe. And he worshipped him.ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
39 And Jesus said, For judgment came I into this world, that they that see not may see; and that they that see may become blind.ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
40 Those of the Pharisees who were with him heard these things, and said unto him, Are we also blind?ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.
41 Jesus said unto them, If ye were blind, ye would have no sin: but now ye say, We see: your sin remaineth.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು
Kannada Bible