John 9 - KJV (Kannada)
1 And as Jesus passed by, he saw a man which was blind from his birth.ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
2 And his disciples asked him, saying, Master, who did sin, this man, or his parents, that he was born blind?ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
3 Jesus answered, Neither hath this man sinned, nor his parents: but that the works of God should be made manifest in him.ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
4 I must work the works of him that sent me, while it is day: the night cometh, when no man can work.ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
5 As long as I am in the world, I am the light of the world.ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
6 When he had thus spoken, he spat on the ground, and made clay of the spittle, and he anointed the eyes of the blind man with the clay,ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
7 And said unto him, Go, wash in the pool of Siloam, (which is by interpretation, Sent.) He went his way therefore, and washed, and came seeing.ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
8 The neighbours therefore, and they which before had seen him that he was blind, said, Is not this he that sat and begged?ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
9 Some said, This is he: others said, He is like him: but he said, I am he.ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.
10 Therefore said they unto him, How were thine eyes opened?ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
11 He answered and said, A man that is called Jesus made clay, and anointed mine eyes, and said unto me, Go to the pool of Siloam, and wash: and I went and washed, and I received sight.ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
12 Then said they unto him, Where is he? He said, I know not.ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
13 They brought to the Pharisees him that aforetime was blind.ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
14 And it was the sabbath day when Jesus made the clay, and opened his eyes.ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್‌ದಿನವಾಗಿತ್ತು.
15 Then again the Pharisees also asked him how he had received his sight. He said unto them, He put clay upon mine eyes, and I washed, and do see.ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
16 Therefore said some of the Pharisees, This man is not of God, because he keepeth not the sabbath day. Others said, How can a man that is a sinner do such miracles? And there was a division among them.ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
17 They say unto the blind man again, What sayest thou of him, that he hath opened thine eyes? He said, He is a prophet.ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
18 But the Jews did not believe concerning him, that he had been blind, and received his sight, until they called the parents of him that had received his sight.ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
19 And they asked them, saying, Is this your son, who ye say was born blind? how then doth he now see?ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
20 His parents answered them and said, We know that this is our son, and that he was born blind:ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
21 But by what means he now seeth, we know not; or who hath opened his eyes, we know not: he is of age; ask him: he shall speak for himself.ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
22 These words spake his parents, because they feared the Jews: for the Jews had agreed already, that if any man did confess that he was Christ, he should be put out of the synagogue.ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
23 Therefore said his parents, He is of age; ask him.ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
24 Then again called they the man that was blind, and said unto him, Give God the praise: we know that this man is a sinner.ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
25 He answered and said, Whether he be a sinner or no, I know not: one thing I know, that, whereas I was blind, now I see.ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
26 Then said they to him again, What did he to thee? how opened he thine eyes?ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
27 He answered them, I have told you already, and ye did not hear: wherefore would ye hear it again? will ye also be his disciples?ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
28 Then they reviled him, and said, Thou art his disciple; but we are Moses' disciples.ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
29 We know that God spake unto Moses: as for this fellow, we know not from whence he is.ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
30 The man answered and said unto them, Why herein is a marvellous thing, that ye know not from whence he is, and yet he hath opened mine eyes.ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
31 Now we know that God heareth not sinners: but if any man be a worshipper of God, and doeth his will, him he heareth.ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
32 Since the world began was it not heard that any man opened the eyes of one that was born blind.ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
33 If this man were not of God, he could do nothing.ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
34 They answered and said unto him, Thou wast altogether born in sins, and dost thou teach us? And they cast him out.ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35 Jesus heard that they had cast him out; and when he had found him, he said unto him, Dost thou believe on the Son of God?ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
36 He answered and said, Who is he, Lord, that I might believe on him?ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
37 And Jesus said unto him, Thou hast both seen him, and it is he that talketh with thee.ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
38 And he said, Lord, I believe. And he worshipped him.ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
39 And Jesus said, For judgment I am come into this world, that they which see not might see; and that they which see might be made blind.ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
40 And some of the Pharisees which were with him heard these words, and said unto him, Are we blind also?ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.
41 Jesus said unto them, If ye were blind, ye should have no sin: but now ye say, We see; therefore your sin remaineth.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು
Kannada Bible