1 Kings 2:1
ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ
1 Kings 2:1 in Other Translations
King James Version (KJV)
Now the days of David drew nigh that he should die; and he charged Solomon his son, saying,
American Standard Version (ASV)
Now the days of David drew nigh that he should die; and he charged Solomon his son, saying,
Bible in Basic English (BBE)
Now the time of David's death came near; and he gave orders to Solomon his son, saying,
Darby English Bible (DBY)
And the days of David were at hand that he should die; and he enjoined Solomon his son saying,
Webster's Bible (WBT)
Now the days of David drew nigh that he should die; and he charged Solomon his son, saying,
World English Bible (WEB)
Now the days of David drew near that he should die; and he charged Solomon his son, saying,
Young's Literal Translation (YLT)
And draw near do the days of David to die, and he chargeth Solomon his son, saying,
| Now the days | וַיִּקְרְב֥וּ | wayyiqrĕbû | va-yeek-reh-VOO |
| of David | יְמֵֽי | yĕmê | yeh-MAY |
| drew nigh | דָוִ֖ד | dāwid | da-VEED |
| die; should he that | לָמ֑וּת | lāmût | la-MOOT |
| and he charged | וַיְצַ֛ו | wayṣǎw | vai-TSAHV |
| אֶת | ʾet | et | |
| Solomon | שְׁלֹמֹ֥ה | šĕlōmō | sheh-loh-MOH |
| his son, | בְנ֖וֹ | bĕnô | veh-NOH |
| saying, | לֵאמֹֽר׃ | lēʾmōr | lay-MORE |
Cross Reference
ಆದಿಕಾಂಡ 47:29
ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
ಧರ್ಮೋಪದೇಶಕಾಂಡ 31:14
ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
2 ಪೇತ್ರನು 1:13
ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.
2 ತಿಮೊಥೆಯನಿಗೆ 4:6
ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
2 ತಿಮೊಥೆಯನಿಗೆ 4:1
ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
1 ತಿಮೊಥೆಯನಿಗೆ 6:13
ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
1 ತಿಮೊಥೆಯನಿಗೆ 1:18
ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
ಅಪೊಸ್ತಲರ ಕೃತ್ಯಗ 20:28
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಧರ್ಮೋಪದೇಶಕಾಂಡ 33:1
ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ಧರ್ಮೋಪದೇಶಕಾಂಡ 31:23
ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
ಧರ್ಮೋಪದೇಶಕಾಂಡ 3:28
ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.
ಅರಣ್ಯಕಾಂಡ 27:19
ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.