1 Chronicles 16 - WEB (Kannada)
1 They brought in the ark of God, and set it in the midst of the tent that David had pitched for it: and they offered burnt offerings and peace-offerings before God.1 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
2 When David had made an end of offering the burnt offering and the peace-offerings, he blessed the people in the name of Yahweh.ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
3 He dealt to everyone of Israel, both man and woman, to every one a loaf of bread, and a portion [of flesh], and a cake of raisins.ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.
4 He appointed certain of the Levites to minister before the ark of Yahweh, and to celebrate and to thank and praise Yahweh, the God of Israel:ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
5 Asaph the chief, and second to him Zechariah, Jeiel, and Shemiramoth, and Jehiel, and Mattithiah, and Eliab, and Benaiah, and Obed-edom, and Jeiel, with psalteries and with harps; and Asaph with cymbals, sounding aloud;ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
6 and Benaiah and Jahaziel the priests with trumpets continually, before the ark of the covenant of God.ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
7 Then on that day David first ordained to give thanks to Yahweh, by the hand of Asaph and his brothers.ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
8 Oh give thanks to Yahweh, call on his name; Make known his doings among the peoples.ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
9 Sing to him, sing praises to him; Talk you of all his marvelous works.ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
10 Glory you in his holy name; Let the heart of them rejoice who seek Yahweh.ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
11 Seek you Yahweh and his strength; Seek his face forever more.ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
12 Remember his marvelous works that he has done, His wonders, and the judgments of his mouth,ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
13 You seed of Israel his servant, You children of Jacob, his chosen ones.ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,
14 He is Yahweh our God; His judgments are in all the earth.ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
15 Remember his covenant forever, The word which he commanded to a thousand generations,ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು
16 [The covenant] which he made with Abraham, His oath to Isaac,ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.
17 Confirmed the same to Jacob for a statute, To Israel for an everlasting covenant,ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ
18 Saying, To you will I give the land of Canaan, The lot of your inheritance;ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು.
19 When you were but a few men in number, Yes, very few, and foreigners in it;ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.
20 They went about from nation to nation, From one kingdom to another people.ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು.
21 He allowed no man to do them wrong; Yes, he reproved kings for their sakes,ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು.
22 [Saying], Don't touch my anointed ones, Do my prophets no harm.ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.
23 Sing to Yahweh, all the earth; Show forth his salvation from day to day.ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
24 Declare his glory among the nations, His marvelous works among all the peoples.ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
25 For great is Yahweh, and greatly to be praised: He also is to be feared above all gods.ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
26 For all the gods of the peoples are idols: But Yahweh made the heavens.ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
27 Honor and majesty are before him: Strength and gladness are in his place.ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ.
28 Ascribe to Yahweh, you relatives of the peoples, Ascribe to Yahweh glory and strength;ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ,
29 Ascribe to Yahweh the glory due to his name: Bring an offering, and come before him: Worship Yahweh in holy array.ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
30 Tremble before him, all the earth: The world also is established that it can't be moved.ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
31 Let the heavens be glad, and let the earth rejoice; Let them say among the nations, Yahweh reigns.ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
32 Let the sea roar, and the fullness of it; Let the field exult, and all that is therein;ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
33 Then shall the trees of the wood sing for joy before Yahweh; For he comes to judge the earth.ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
34 Oh give thanks to Yahweh; for he is good; For his loving kindness endures forever.ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
35 Say you, Save us, God of our salvation, Gather us together and deliver us from the nations, To give thanks to your holy name, To triumph in your praise.ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
36 Blessed be Yahweh, the God of Israel, From everlasting even to everlasting. All the people said, Amen, and praised Yahweh.ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
37 So he left there, before the ark of the covenant of Yahweh, Asaph and his brothers, to minister before the ark continually, as every day's work required;ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
38 and Obed-edom with their brothers, sixty-eight; Obed-edom also the son of Jeduthun and Hosah to be doorkeepers;ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
39 and Zadok the priest, and his brothers the priests, before the tent of Yahweh in the high place that was at Gibeon,ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
40 to offer burnt offerings to Yahweh on the altar of burnt offering continually morning and evening, even according to all that is written in the law of Yahweh, which he commanded to Israel;ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
41 and with them Heman and Jeduthun, and the rest who were chosen, who were mentioned by name, to give thanks to Yahweh, because his loving kindness endures forever;ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
42 and with them Heman and Jeduthun [with] trumpets and cymbals for those that should sound aloud, and [with] instruments for the songs of God; and the sons of Jeduthun to be at the gate.ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.
43 All the people departed every man to his house: and David returned to bless his house.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
Kannada Bible